ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಸಲ ಡಿಫರೆಂಟ್‌ ದಸರಾ ಅಂತೆ: ಎಚ್ಡಿಕೆ ಪ್ಲ್ಯಾನ್‌ ಏನು?

By Nayana
|
Google Oneindia Kannada News

Recommended Video

ಮೈಸೂರು ದಸರಾವನ್ನು ಪ್ರವಾಸೋದ್ಯಮ ಕೇಂದ್ರಿತವಾಗಿ ಆಚರಿಸುವಂತೆ ಎಚ್ಡಿಕೆ ಪ್ಲ್ಯಾನ್‌ | Oneindia kannada

ಬೆಂಗಳೂರು, ಜು.12: ಈ ಬಾರಿ ಮೈಸೂರು ದಸರಾವನ್ನು ಪ್ರವಾಸೋದ್ಯಮ ಕೇಂದ್ರಿತವಾಗಿ ಆಚರಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಲಹೆ ನೀಡಿದರು.

ಅವರು ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪೂರಕವಾಗಿ ಮೈಸೂರು ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಮೈಸೂರು: ಈ ಬಾರಿ ದಸರಾ ಪ್ರಮುಖ ಆಕರ್ಷಣೆ ಟೆಂಟ್ ಟೂರಿಸಂಮೈಸೂರು: ಈ ಬಾರಿ ದಸರಾ ಪ್ರಮುಖ ಆಕರ್ಷಣೆ ಟೆಂಟ್ ಟೂರಿಸಂ

ಪ್ರತಿವರ್ಷದ ಕಾರ್ಯಕ್ರಮಗಳಿಗಿಂತ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ತಿಳಿಸಿದರು.ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 20 ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ, ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದು ತಿಳಿಸಿದರು.

HDK plans for different Dussehra this time!

ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಣೆ: ಸಿಎಂ ಕುಮಾರಸ್ವಾಮಿಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಣೆ: ಸಿಎಂ ಕುಮಾರಸ್ವಾಮಿ

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಎಸ್. ಪುಟ್ಟರಂಗಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಸಚಿವ ಡಾ. ಜಯಮಾಲ, ಆ ಭಾಗದ ಶಾಸಕರು, ಇತರ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

English summary
Dussehra celebration is one of the government's program for many politicos and bureaucrats. But, chief minister H.D.Kumaraswamy has some other ideas about this state festival. What is his plans? Read this story.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X