ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಿಭಟನೆ ನಡೆಸದಂತೆ ಹಾಸನದ ಕಾರ್ಯಕರ್ತರಿಗೆ ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 13: ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಇಂದು ಕೆಲವು ವ್ಯಕ್ತಿಗಳು ಶಾಸಕರ ಮನೆಯ ಸಮೀಪ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ದೇವೇಗೌಡ ಬಗ್ಗೆ ಆಕ್ಷೇಪಾರ್ಹ ಮಾತು: ಬಿಜೆಪಿ ಶಾಸಕನ ಮನೆ ಮುಂದೆ ಪ್ರತಿಭಟನೆ ದೇವೇಗೌಡ ಬಗ್ಗೆ ಆಕ್ಷೇಪಾರ್ಹ ಮಾತು: ಬಿಜೆಪಿ ಶಾಸಕನ ಮನೆ ಮುಂದೆ ಪ್ರತಿಭಟನೆ

ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ನನಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

HDK requested not to protest against BJP MLA

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

English summary
Cheif minister HD Kumaraswamy requested JDS workers that not to protest infront of Hassan MLA Preetham gouda.They alleged that Preetham Gowda talked loosely about tall leader Deve Gowda. stone pelting also happened.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X