ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್‌ ಶಾಸಕರು ಪಕ್ಷ ಬಿಡ್ತಾರೆ ಎನ್ನುವ ಭಯಕ್ಕೆ ಬಿಜೆಪಿ ಪರ ಮಾತಾಡ್ತಿಲ್ಲ: ಎಚ್‌ಡಿಕೆ

|
Google Oneindia Kannada News

Recommended Video

HD Kumaraswamy explains why he has a soft corner on the state government | Oneindia Kannada

ಬೆಂಗಳೂರು, ನವೆಂಬರ್ 2: ಜೆಡಿಎಸ್‌ನ ಯಾವುದೇ ಶಾಸಕರು ಪಕ್ಷ ಬಿಡುತ್ತಾರೆ ಎನ್ನುವ ಭಯಕ್ಕೆ ನಾನು ಬಿಜೆಪಿ ಪರ ಮಾತನಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೆಡಿಎಸ್‌ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎನ್ನುವ ಕಾರಣಕ್ಕೆ ನಾನು ಬಿಜೆಪಿ ಪರ ಮಾತನಾಡುತ್ತಿಲ್ಲ.

ಬಿಜೆಪಿ ಸರ್ಕಾರದ ನೂರು ದಿನದ ಸಾಧನೆ ಶೂನ್ಯ: ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ನೂರು ದಿನದ ಸಾಧನೆ ಶೂನ್ಯ: ಸಿದ್ದರಾಮಯ್ಯ

ಸರ್ಕಾರದ ಬಗ್ಗೆ ನಾನು ಸಾಫ್ಟ್‌ ಕಾರ್ನರ್ ಇರಿಸಿಕೊಂಡಿರುವುದು ಯಾಕೆ ಅಂದರೆ , ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ನಾನು ಪ್ರವಾಸ ಮಾಡಿ ಹತ್ತಿರದಿಂದ ಗಮನಿಸಿದ್ದೇನೆ. ರಾಜಕಾರಣ ಮಾಡಿ ಆ ಸರ್ಕಾರ ಅಸ್ಥಿರ ಮಾಡಲು ಹೊರಟರೆ, ನೆರೆ ಪೀಡಿತರ ಕತೆ ಏನು ಎಂಬುದಷ್ಟೇ ನನ್ನ ಆತಂಕ ಎಂದು ಹೇಳಿದ್ದಾರೆ.

ದೇಶ ಮತ್ತು ರಾಜ್ಯ ರಾಜಕಾರಣ ಗೊಂದಲಮಯ

ದೇಶ ಮತ್ತು ರಾಜ್ಯ ರಾಜಕಾರಣ ಗೊಂದಲಮಯ

ದೇಶ ಮತ್ತು ರಾಜ್ಯ ರಾಜಕಾರಣ ಗೊಂದಲಮಯವಾಗಿದೆ, ಕೇಂದ್ರದಲ್ಲಿ ಸುಭದ್ರ ಸರ್ಕಾರವಿದ್ದರೂ ಆತಂಕದ ಆರ್ಥಿಕ ಸ್ಥಿತಿ ಇದೆ. ರಾಜ್ಯದಲ್ಲಿ ಅತಿವೃಷ್ಟಿ ತಾರಕಕ್ಕೆ ಏರಿದೆ. ಆದ್ರೆ ಸರಕಾರ ಇದಕ್ಕೆ ತಕ್ಕಂತೆ ವರ್ತನೆ ಮಾಡಲಿಲ್ಲ.

ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಿ ಯಡಿಯೂರಪ್ಪ ಹರಸಾಹಸ ಪಟ್ಟು ಅಧಿಕಾರಕ್ಕೆ ಬಂದರು. ಆಗ ಸುರಿದ ಮಳೆ- ಯಡಿಯೂರಪ್ಪ ಅವರ ಕಾಲ್ಗುಣ ಅಂದ್ರು. ಆದ್ರೆ ಮಳೆ ಜಾಸ್ತಿ ಆಗುತ್ತಿದ್ದಂತೆ ಯಡಿಯೂರಪ್ಪ ಅವರೇ, ದೇವರ ಅವಕೃಪೆಗೆ ನಾವು ಒಳಗಾಗಿದ್ದೇವೆ ಎಂದಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಪ್ರಧಾನಿ ಹಗುರವಾಗಿ ತೆಗೆದುಕೊಂಡಿದ್ದಾರೆ

ಯಡಿಯೂರಪ್ಪ ಅವರನ್ನು ಪ್ರಧಾನಿ ಹಗುರವಾಗಿ ತೆಗೆದುಕೊಂಡಿದ್ದಾರೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಹಗುರವಾಗಿ ತೆಗೆದುಕೊಂಡಿದ್ದಾರೆ. ಸಿಎಂ ದೆಹಲಿಗೆ ಹೋದರೆ ಅವರನ್ನು ಮಾತನಾಡಿಸುವವರೂ ಇಲ್ಲ.‌ ಇದು ಅವರಿಗೆ ಮಾತ್ರವಲ್ಲ, ಇಡೀ ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದ ನಡುವೆ ಸಮನ್ವಯ ಇಲ್ಲ

ಕೇಂದ್ರ ಮತ್ತು ರಾಜ್ಯದ ನಡುವೆ ಸಮನ್ವಯ ಇಲ್ಲ

ಕೇಂದ್ರ ಮತ್ತು ರಾಜ್ಯ ಸರಕಾರದ ನಡುವೆ ಸಮನ್ವಯ ಇಲ್ಲ.‌ ನೆರೆ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನವೇ ಇದಕ್ಕೆ ಸಾಕ್ಷಿ.

ಇನ್ನು ಕಂದಾಯ ಸಚಿಚರು ರಾಜ್ಯದಲ್ಲಿ ಇದ್ದಾರಾ? ಅಂತ ಅನುಮಾನ ಇದೆ. ಇವರ ಎಲ್ಲೆಲ್ಲಿ ಭೇಟಿ ನೀಡಿದ್ದಾರೆ? ಎಷ್ಟು ಸಭೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ? ಯಾರಿಗೂ ಗೊತ್ತಿಲ್ಲ. ಆರ್.ಅಶೋಕ್‌ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಕೆಲವೇ ದಿನಗಳಲ್ಲಿ ಸರ್ಕಾರ ಅಧಿಕಾರ ಕಳೆದುಕೊಳ್ಳಬಹುದು

ಕೆಲವೇ ದಿನಗಳಲ್ಲಿ ಸರ್ಕಾರ ಅಧಿಕಾರ ಕಳೆದುಕೊಳ್ಳಬಹುದು

ಕೆಲವೇ ದಿನಗಳಲ್ಲಿ ಸರಕಾರ ಅಧಿಕಾರ ಕಳೆದುಕೊಂಡರೂ ಆಶ್ಚರ್ಯ ಇಲ್ಲ ಎಂದು ಬಿಜೆಪಿ‌ ಸಚಿವರೇ ಹೇಳಿದ್ದಾರೆ.‌ ಇಂಥ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಶಿಸ್ತಿನಿಂದ ಹೇಗೆ ಕೆಲಸ ಮಾಡ್ತಾರೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

English summary
I am not speaking on behalf of the BJP for fear that any JDS MLA will leave Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X