ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಸದ ಮುದ್ದಹನುಮೇಗೌಡ ತುಮಕೂರಿನಿಂದ ಸ್ಪರ್ಧೆ, ಸಿಎಂ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 23: ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷದಿಂದ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ವಿಚಾರ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಿಷ್ಟು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ನಾನು ಯಾರೊಂದಿಗೂ ಭಿಕ್ಷೆ ಬೇಡುವುದಿಲ್ಲ, ಮುದ್ದಹನುಮೇಗೌಡ ಅವರ ವಿಚಾರ ನಮ್ಮ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ನಮ್ಮ ಪಕ್ಷಕ್ಕೆ ಒಟ್ಟು 8 ಕ್ಷೇತ್ರವನ್ನು ನೀಡಲಾಗಿದೆ. ಅಲ್ಲಿಂದ 8 ಅಭ್ಯರ್ಥಿಗಳನ್ನು ನಾವು ನಿಲ್ಲಿಸುತ್ತಿದ್ದೇವೆ ಎಂದಿದ್ದಾರೆ.

ನಾಮಪತ್ರ ಸಲ್ಲಿಸಲಿರುವ ಮುದ್ದಹನುಮೇಗೌಡ, ಆತಂಕದಲ್ಲಿ ದೇವೇಗೌಡ ನಾಮಪತ್ರ ಸಲ್ಲಿಸಲಿರುವ ಮುದ್ದಹನುಮೇಗೌಡ, ಆತಂಕದಲ್ಲಿ ದೇವೇಗೌಡ

ನಾನು ಯಾರಿಗೂ ಭಿಕ್ಷೆ ಬೇಡಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಲ್ಲ. ನನಗೂ ನಮ್ಮ ಕಾರ್ಯಕರ್ತರಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

HDK says Muddahanumegowda issue is not related to me

ಕಾಂಗ್ರೆಸ್ ನಾಯಕರಿಗೆ ಮೈತ್ರಿ ವಿಚಾರವಾಗಿ ಈಗಾಗಲೇ ಮಂಡ್ಯದಲ್ಲಿ ಹೇಳಿದ್ದೇನೆ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಕಾಂಗ್ರೆಸ್‌ನವರು ಅವರ ಕೆಲಸ ಮಾಡಲಿ. ನಮಗೂ ಶಕ್ತಿ ಇದೆ. ಪಕ್ಷದ ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ ಎಂದು ಹೇಳಿದರು.

ಜೆಡಿಎಸ್ ಸಂಸದರು ಏನು ವಿದ್ಯಾರ್ಹತೆ ಪಡೆದಿದ್ದಾರೆ?

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣಕ್ಕೆ ಇಳಿಯುತ್ತಿದ್ದಾರೆ ಎಂದರು.

English summary
Chief minister HD Kumaraswamy said that Muddahanumegowda's issue is not related to me. My pary has been given 8 seats and we are fielding candidates. This related to congress. I have already said this in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X