ಜೈಲಿನಿಂದ ಹೊರಬಂದು ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರವೆಸಗಿದ

ಬೆಂಗಳೂರು, ಫೆಬ್ರವರಿ 5: ಅತ್ಯಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿದ್ದ ಆರೋಪಿ ಬಿಡುಗಡೆ ಬಳಿಕ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಪ್ರೀತಿ ಮಾಡುವುದಾಗಿ ಹೇಳಿ ಬಲವಂತವಾಗಿ ಅತ್ಯಾಚಾರ ಮಾಡಿದ್ದ ಅಕ್ಬರ್ ಪಾಷಾ ವಿರುದ್ಧ ನೊಂದ ಯುವತಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಅಕ್ಬರ್ ಪಾಷಾನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಎರಡನೇ ಬಾರಿ ಜೈಲಿನಿಂದ ಹೊರಗೆ ಬಂದ ಅಕ್ಬರ್ ಪಾಷಾ, ಯುವತಿ ಕಾಲೇಜಿನಿಂದ ಮನೆಗೆ ಹೋಗುವಾಗ ಅಡ್ಡ ಗಟ್ಟಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ನಿಮ್ಮ ತಾಯಿ ಹಾಗೂ ಅಣ್ಣನನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮೂರನೇ ಬಾರಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

He Got Out Of Jail and Raped The Same Girl

ವರ್ಷದ ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದ ಅಕ್ಬರ್ ಅದೇ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತೆ ಯುವತಿ ಅದೇ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅಕ್ಬರ್ ವಿರುದ್ಧ ದೂರು ನೀಡಿ ಜೈಲಿಗೆ ಕಳುಹಿಸಿದ್ದಳು.

ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಅಕ್ಬರ್ ಪಾಷಾನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಆಕೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+