ಬೆಂಗಳೂರು : ಕೆ.ಆರ್.ಮಾರ್ಕೆಟ್ ಠಾಣೆ ಮುಖ್ಯಪೇದೆ ನೇಣಿಗೆ ಶರಣು

ಬೆಂಗಳೂರು, ನವೆಂಬರ್ 16 : ಹೆಡ್ ಕಾನ್ಸ್‌ಟೇಬಲ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಾಮರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡವರು. ಚಾಮರಾಜಪೇಟೆ ಸಮೀಪದ ಜಿಂಕೆ ಪಾರ್ಕ್ ಬಳಿಯ ಭೀಮಾರಾವ್ ನಗರದಲ್ಲಿನ ಮನೆಯಲ್ಲಿ ಪ್ರಕಾಶ್ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

suicide

ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. [ಸಂಬಂಧಿಕರ ವಿಕೃತ ಸಂತೋಷಕ್ಕೆ ಬಲಿಯಾದ ಸಂಗೀತಾ]

ಠಾಣೆಗೆ ಹೋಗಿದ್ದರು : ಪ್ರಕಾಶ್ ಭಾನುವಾರ ಪೊಲೀಸ್ ಠಾಣೆಗೆ ಹೋಗಿ ಕರ್ತವ್ಯ ನಿರ್ವಹಿಸಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ವಾಪಸ್ ಆಗಿದ್ದರು. ಊಟ ಮುಗಿಸಿ, ಟಿವಿ ನೋಡಿ 11 ಗಂಟೆಗೆ ಮಲಗಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಪತ್ನಿ ಮತ್ತು ಮಕ್ಕಳು ನಿದ್ರೆ ಹೋದ ಬಳಿ ಎದ್ದಿರುವ ಪ್ರಕಾಶ್ ಹಾಲ್‌ಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಪತ್ನಿ ಎಚ್ಚರಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.

1996ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದ ಪ್ರಕಾಶ್ ಅವರು ಸಿಸಿಬಿ ಹಾಗೂ ವಿಜಯನಗರ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಸಿಟಿ ಮಾರ್ಕೆಟ್ ಠಾಣೆಗೆ ವರ್ಗಾವಣೆಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+