• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.7ರಂದು ''ಬೆಂಗಳೂರು ಚಲೋ": ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

|
Google Oneindia Kannada News

ಬೆಂಗಳೂರು ಜು.6: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ (ಬಿಎಂಎಸ್) ಸಂಘದ ನೇತೃತ್ವದಲ್ಲಿ ಗುರುವಾರ (ಜುಲೈ7) ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಇದರಿಂದಾಗಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಈ ಕುರಿತು ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್.ಯಮೋಜಿ ಅವರು, ಸರ್ಕಾರದ ಅಸಂಬದ್ಧ ಮೂರು ತಿಂಗಳ ಮೌಲ್ಯಮಾಪನ ಆದೇಶ, ಸಮಾನ ವೇತನ, ಸೇವಾಭದ್ರತೆ, ಕೃಪಾಂಕ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು ಸರ್ಕಾರ ಸ್ಪಂದಿಸಿಲ್ಲ. ಸಂಘದ ಗೌರವ ಅಧ್ಯಕ್ಷ ಆಯನೂರು ಮಂಜುನಾಥ್ ಸೇರಿದಂತೆ ಮುಖಂಡರು ಸಮಸ್ಯೆಗಳ ಪರಿಹಾರಕ್ಕೆ ಶಾಂತಿಯುತವಾಗಿ ಪತ್ರದ ಮೂಲಕ ಮನವಿ ಮಾಡಿದೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ತಾಳಿರುವುದು ನೌಕರರನ್ನು ಕೆರಳಿಸಿದೆ. ಈ ಕಾರಣದಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ. ಸಂಘವು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ನಡೆಯಲಿರುವ ಪ್ರತಿಭಟನೆಯ ನೇತೃತ್ವ ವಹಿಸಿದೆ ಎಂದು ತಿಳಿದು ಬಂದಿದೆ.

ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನಕ್ಕೆ ಆಗ್ರಹ

ಬೇಡಿಕೆ ಈಡೇರಿಸಬೇಕಾದ ಸರ್ಕಾರವೇ ನೌಕರರಿಗೆ ತೊಂದರೆ ಉಂಟಾಗುವ ರೀತಿಯ ನಿರ್ಧಾರ ಕೈಗೊಳ್ಳುತ್ತಿದೆ. ಇದು ಸರಿಯಾದ ಕ್ರಮವಲ್ಲ. ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ನೇತೃತ್ವದ ಸಮಿತಿ ವರದಿ ಸಲ್ಲಿಸಿ ವರ್ಷಗಳಾದರೂ ವರದಿಯಲ್ಲಿ ಶಿಫಾರಸು ಅನುಷ್ಠಾನ ಮಾಡುವ ಆಸಕ್ತಿ ಸರ್ಕಾರಕ್ಕೆ ಇಲ್ಲ. ಇದರಿಂದ ನೌಕರರಿಗೆ ನೋವಾಗಿದ್ದು, ಅನಿವಾರ್ಯವಾಗಿ ಪ್ರತಿಭಟನೆ ಮೂಲಕ ನಮ್ಮ ಹಕ್ಕುಗಳನ್ನು ಸರ್ಕಾರದ ಮುಂದಿಡಲಿದ್ದೇವೆ.

Recommended Video

   PT Usha ಓಡುವ ಟ್ರ್ಯಾಕ್ ‌ನಿಂದ ಈಗ ರಾಜ್ಯಸಭೆ ಕಡೆಗೆ | *Sports | OneIndia Kannada

   ಸೇವೆ ವ್ಯತ್ಯಯಕ್ಕೆ ಸರ್ಕಾರವೇ ಹೊಣೆ

   ಪ್ರತಿಭಟನೆಗೆ ರಾಜ್ಯದ ಮೂಲ ಮೂಲೆಗಳಿಂದ ಜನರು ಆಗಮಿಸದ್ದಾರೆ. ಆರೋಗ್ಯ ಇಲಾಖೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರೆ ಇರುವುದರಿಂದ ಅವರೆಲ್ಲರು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದ ವೈದ್ಯಕೀಯ ಸೇವೆಯಲ್ಲಿ ವ್ಯತಯವಾದರೆ ಅದಕ್ಕೆ ಸರ್ಕಾರವೇ ಹೊಣೆ ಹೊರತು ನೌಕರರಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್.ಯಮೋಜಿ ತಿಳಿಸಿದ್ದಾರೆ.

   English summary
   Karnataka state Health department contract employees announced 'Bengaluru Chalo' on July 7th for fulfillment of various demands, contract employees association state president Vishwaradhya H Yamoji said,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X