ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಕ್ಸಲ್ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಿಬ್ಬಂದಿ ಭೇಟಿ: ಶ್ರೀರಾಮುಲು ಶ್ಲಾಘನೆ

|
Google Oneindia Kannada News

ಬೆಂಗಳೂರು, ಜುಲೈ 7: ಕೊರೊನಾ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಅದಾಗಲೇ ಭಾರಿ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಇದೀಗ, ನಕ್ಸಲ್ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಆರೋಗ್ಯ ಪರಿಶೀಲಿಸಿ ಸೂಕ್ತ ಚಿಕಿತ್ಸೆ ನೀಡಿರುವ ಘಟನೆಗಳು ವರದಿಯಾಗಿದೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜುಲೈ 10ರಿಂದ ಕೆಲಸ ನಿಲ್ಲಿಸಿ ಆಶಾ ಕಾರ್ಯಕರ್ತೆಯರ ಮುಷ್ಕರಜುಲೈ 10ರಿಂದ ಕೆಲಸ ನಿಲ್ಲಿಸಿ ಆಶಾ ಕಾರ್ಯಕರ್ತೆಯರ ಮುಷ್ಕರ

ತಮ್ಮ ಜೀವವನ್ನ ಲೆಕ್ಕಿಸದೆ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಶ್ರೀರಾಮುಲು ಸಲ್ಯೂಟ್ ಮಾಡಿದ್ದಾರೆ. ''ಕೊರೊನದಂತಹ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಪ್ರತಿ ಹಳ್ಳಿಹಳ್ಳಿಗಳಿಗೆ ತೆರಳಿ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ'' ಎಂದು ಮೆಚ್ಚಿದ್ದಾರೆ.

''ನಕ್ಸಲ್ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲ್ಲೂಕಿನ ಕೊರಗ ಕಾಲೋನಿಯಲ್ಲಿ ವಾಸಿಸುವ ಸುಮಾರು 40 ಕ್ಕೂ ಹೆಚ್ಚಿನ‌ ಕುಟುಂಬಗಳಲ್ಲಿ ಕೆಲವರಿಗೆ ಡೆಂಗ್ಯೂ ಸೇರಿದಂತೆ ಜ್ವರದ‌ ಲಕ್ಷಣಗಳು ಕಾಣಿಸಿಕೊಂಡಿವೆ''

Health Minister Sriramulu Praised To Asha karyakarte for visiting Naxal prone areas

''ಆ ಭಾಗದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ರಭಸವಾಗಿ ಹರಿಯುವ ನದಿಯನ್ನು ಕಿರಿದಾದ ಕಾಲುಸೇತುವೆಯ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡು ದಾಟಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ರೋಗಗಳ ಕುರಿತು ಮುಂಜಾಗ್ರತೆ ವಹಿಸುವಂತೆ ಅರಿವು ಮೂಡಿಸಿ ಬಂದಿದ್ದಾರೆ. ಅವರ ಕರ್ತವ್ಯ ನಿಷ್ಠೆ, ನಿಸ್ವಾರ್ಥ ಸೇವೆ ನಿಜಕ್ಕೂ‌ ಮೆಚ್ಚುವಂಥದ್ದು'' ಎಂದು ಆರೋಗ್ಯ ಸಚಿವರು ಶ್ಲಾಘಿಸಿದ್ದಾರೆ.

English summary
Health Minister Sriramulu Praised To Asha karyakarte and Health Officers for visiting Naxal prone areas at belthangady.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X