• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಆಮ್ಲಜನಕ ಪೂರೈಕೆಯಲ್ಲಿ ಮೊದಲ ಆದ್ಯತೆ ಆರೋಗ್ಯ ವಲಯಕ್ಕೆ; ಸುಧಾಕರ್

|

ಬೆಂಗಳೂರು, ಏಪ್ರಿಲ್ 19: ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಿರುವಷ್ಟು ಆಮ್ಲಜನಕವನ್ನು ಪ್ರಥಮ ಆದ್ಯತೆಯಲ್ಲಿ ಪೂರೈಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.

   'ಜನರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ, ಕಠಿಣ ಕ್ರಮದ ಅವಶ್ಯಕತೆ ಬರ್ತಿರಲಿಲ್ಲ' ಸಚಿವ ಸುಧಾಕರ್‌ | Oneindia Kannada

   ಕೊರೊನಾ ಸೋಂಕಿತರಿಗೆ ಬೇಡಿಕೆಗೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಸಚಿವ ಡಾ.ಕೆ.ಸುಧಾಕರ್, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಸಂಸದ ತೇಜಸ್ವಿ ಸೂರ್ಯ ಅವರು ಆಮ್ಲಜನಕ ಪೂರೈಕೆದಾರರು, ಉತ್ಪಾದಕ ಸಂಸ್ಥೆಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ.

   ರಾಜ್ಯದಲ್ಲಿ ಆಮ್ಲಜನಕಕ್ಕೆ ಯಾವುದೇ ಕೊರತೆಯಾಗದಂತೆ ಉತ್ಪಾದನೆ ಮಾಡಬೇಕು. ಹಾಗೆಯೇ ಕೊರತೆ ಉಂಟಾಗದಂತೆ ಸಿಲಿಂಡರ್ ಗಳನ್ನು ಪೂರೈಕೆ ಮಾಡಬೇಕು. ಬೆಂಗಳೂರು ನಗರಕ್ಕೆ 3,200 ರಷ್ಟು ಸಿಲಿಂಡರ್ ಬೇಡಿಕೆ ಇದ್ದು, ಇದಕ್ಕೆ ತಕ್ಕಂತೆ ಪೂರೈಕೆ ಮಾಡಬೇಕು ಎಂದು ಸೂಚಿಸಲಾಯಿತು. ಇದಕ್ಕೆ ಉತ್ಪಾದಕ ಸಂಸ್ಥೆಗಳು ಹಾಗೂ ಪೂರೈಕೆದಾರರು ಸಹಮತ ವ್ಯಕ್ತಪಡಿಸಿದರು.

   ದಿನದಿಂದ ದಿನಕ್ಕೆ ಆಮ್ಲಜನಕ ಬೇಡಿಕೆಯಲ್ಲಿ ವ್ಯತ್ಯಾಸವಾಗಬಹುದು. ಅದಕ್ಕೆ ತಕ್ಕಂತೆ ಪೂರೈಕೆ ಮಾಡಬೇಕಾಗುತ್ತದೆ, ಏಪ್ರಿಲ್ 30 ರವರೆಗೂ ಇರುವ ಬೇಡಿಕೆಯನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು. ಕೈಗಾರಿಕೆ ಬಳಕೆಗೂ ಆಮ್ಲಜನಕ ಅಗತ್ಯವಿದೆ. ಆದರೆ ಮೊದಲ ಆದ್ಯತೆಯನ್ನು ಆರೋಗ್ಯ ವಲಯಕ್ಕೆ ನೀಡಬೇಕು. ಇದಕ್ಕಾಗಿ ಕೈಗಾರಿಕಾ ಬಳಕೆಗೆ ಪೂರೈಸುವ ಆಮ್ಲಜನಕದ ಪ್ರಮಾಣ ಕಡಿಮೆ ಮಾಡಿ, ಆರೋಗ್ಯ ಕೇಂದ್ರಗಳಿಗೆ ಹೆಚ್ಚು ಆಮ್ಲಜನಕ ಪೂರೈಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.

   ರಾಜ್ಯದಲ್ಲಿ ಕೊರೊನಾ ಏರಿಕೆ; ಏ.20ಕ್ಕೆ ರಾಜ್ಯಪಾಲರ ನೇತೃತ್ವದಲ್ಲಿ ಸಭೆ

   ಕೇಂದ್ರಕ್ಕೆ ಮನವಿ: ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ಅಕ್ಕಪಕ್ಕದ ರಾಜ್ಯಗಳಿಗೂ ಕಳುಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುವ ನಿಟ್ಟಿನಲ್ಲಿ ರಾಜ್ಯದಲ್ಲೇ ಅದರ ಉಪಯೋಗ ಮಾಡಿಕೊಳ್ಳಬೇಕಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಗಳಿಗೆ ಅಗತ್ಯ ಸೂಚನೆ ನೀಡಬೇಕು. ರಾಜ್ಯಕ್ಕೆ ಬೇಕಾಗಿರುವ ಸಿಲಿಂಡರ್‌ಗಳನ್ನು ಒದಗಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

   ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆ ಮೀಸಲಿಡಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ಹಾಸಿಗೆ ಮೀಸಲಿಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

   English summary
   State health minister K Sudhakar has instructed that the state's health sector needs to provide adequate oxygen as a priority
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X