ವಾಹನಗಳಿಗೆ ದಂಡ ವಿಧಿಸುವಾಗ ಹೃದಯಾಘಾತದಿಂದ ಎಎಸ್ಐ ಸಾವು
ಬೆಂಗಳೂರು, ಫೆಬ್ರವರಿ 15: ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ದಂಡ ವಿಧಿಸುತ್ತಿದ್ದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ತೀವ್ರ ಹೃದಯಘಾತದಿಂದ ಕುಸಿದು ಬಿದ್ದು ಸೋಮವಾರ ಸಾವನ್ನಪ್ಪಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯಣ್ಣ ಮೃತಪಟ್ಟವರು. ಮೂಲತಃ ಚಿಕ್ಕಮಗಳೂರಿನವರದಾದ ಇವರು ಮಧ್ಯಾಹ್ನ 1.30 ರ ಸುಮಾರಿನಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ವಾಹನಗಳನ್ನು ತಡೆದು ದಂಡ ಹಾಕುತ್ತಿದ್ದರು.
ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನದ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ | Oneindia Kannada
ದಂಡ ಹಾಕುವ ವೇಳೆಯೇ ಹೃದಯ ಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹಿರಿಯಣ್ಣನ ನಿಧನಕ್ಕೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಚಿಕ್ಕಮಗಳೂರಿನವರಾದ ಹಿರಿಯಣ್ಣ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.