Heart attack: ಐಟಿ ದಾಳಿಯಾದ ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ನಿಧನ
ಬೆಂಗಳೂರು, ನವೆಂಬರ್, 27: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ (ನವೆಂಬರ್ 27) ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕಳೆದ ತಿಂಗಳು ಅಂಬಿಕಾಪತಿ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂಪಾಯಿ ಪತ್ತೆ ಆಗಿತ್ತು. ಈ ಘಟನೆಯಾದ ಬಳಿಕ ಇಂದು (ನವೆಂಬರ್ 27) ಸಂಜೆ ಅಂಬಿಕಾಪತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಮ್ಮ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಬಳಿಕ ಅಂಬಿಕಾಪತಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಹೃದಯಾಘಾತಕ್ಕೆ ಒಳಗಾಗಿ ಅಂಬಿಕಾಪತಿ ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಇದೀಗ ಅಂಬಿಕಾಪತಿ ಮೃತದೇಹವನ್ನು ಕುಟುಂಬಸ್ಥರು ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ಚಾಲಕನಿಗೆ ಹೃದಯಾಘಾತ
ಇನ್ನು ಖಾಸಗಿ ಬಸ್ ಚಾಲಕ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ, ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಇತ್ತೀಚೆಗಷ್ಟೇ ನಡೆದಿದತ್ತು.
ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ. ರೆಡ್ಡಿಹಳ್ಳಿ ಗ್ರಾಮದ ಮಂಜುನಾಥ ಲ್ಲಿ ಹಲವಾರು ವರ್ಷಗಳಿಂದ ಬಸ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹಿರಿಯೂರು ನಗರದ ಖಾಸಗಿ ಬಸ್ ನಿಲ್ದಾಣದಿಂದ ಹೇಮದಳ, ರಂಗೇನಹಳ್ಳಿ, ಬೆಳಗೆರೆ ಕಡೆ ಹೋರಾಟಾಗ ನಗರದಲ್ಲಿದ್ದಾಗ ಚಾಲಕನಿಗೆ ಹಠಾತ್ ಹೃದಯಘಾತ ಸಂಭವಿಸಿದೆ. ಇದರಿಂದ ದೊಡ್ಡ ದುರಂತ ತಪ್ಪಿದೆ. ನಿಯಂತ್ರಣ ಇಲ್ಲದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಅಲ್ಲಿದ್ದ ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಚೇರ್ ಸೇರಿದಂತೆ ಕೆಲವು ವಸ್ತುಗಳು ಮುರಿದು ಬಿದ್ದು ದೊಡ್ಡ ಅನಾಹುತ ತಪ್ಪಿದೆ. ಸದ್ಯ ಈ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿತ್ತು.












Click it and Unblock the Notifications