Rain in Karnataka : ಕರ್ನಾಟಕದ 4 ಜಿಲ್ಲೆಗಳಿಗೆ ಭಾರಿ ಮಳೆ, ಹಳದಿ ಎಚ್ಚರಿಕೆ: IMD
ಬೆಂಗಳೂರು, ಡಿಸೆಂಬರ್ 05: ಬಂಗಾಳಕೊಲ್ಲಿಯಲ್ಲಿ ವಾಯುಭಾರತದ ಕುಸಿತ ಉಂಟಾದ ಪರಿಣಾಮ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ. ಈ ಕಾರಣಕ್ಕೆ ದಕ್ಷಿಣ ಒಳನಾಡು ಜಿಲ್ಲೆಯ ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತು ಚುರುಕಾಗಲಿದೆ. ಡಿಸೆಂಬರ್ 8ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ. ಇದೇ ವೇಳೆ ಕರಾವಳಿ ಭಾಗದ ಮೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜೋರು ಮಳೆ ದಾಖಲಾಗಿದೆ.
Bengaluru Traffic : ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಮ್ಮಿಯಾಗುತ್ತಿರುವುದು ಹೇಗೆ? ಇಲ್ಲಿದೆ ವಿಸ್ತೃತ ವರದಿ
ಮುಂದಿನ ಐದು ದಿನಗಳ ಪೈಕಿ ಡಿಸೆಂಬರ್ 10ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದೆ. ಇಲ್ಲಿ ಗುಡುಗು ಸಹಿತ ಸುಮಾರು 11 ಸೆಂಟಿ ಮೀಟರ್‌ನಷ್ಟು ಮಳೆ ದಾಖಲಾಗಬಹುದು ಎಂದು ರಾಜ್ಯ ಹವಾಮಾನ ಕೇಂದ್ರದ ವರದಿ ತಿಳಿಸಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ನಲ್ಲಿ ಹಲವೆಡೆ ಹಗುರ ಮಳೆ ಕಂಡು ಬರಲಿದೆ. ಇದೇ ಅವಧಿಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆ ಆಗಲಿದೆ. ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.
ಉತ್ತರ ಒಳನಾಡಿಗೆ ಒಣ ಹವೆ
ಮುಂದಿನ ಐದು ದಿನವು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಈ ಭಾಗದಲ್ಲಿ ಎಲ್ಲಿಯೂ ಮಳೆ ಬೀಳುವ ಲಕ್ಷಣಗಳು ಇಲ್ಲ. ದಕ್ಷಿಣ ಅಂಡಮಾನ್ ಹಾಗೂ ಬಂಗಾಳಕೊಲ್ಲಿಯಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ. ಅದು ಕರಾವಳಿ ಪ್ರದೇಶದಲ್ಲಿ ಸಾಗಿ ಬರುತ್ತಿರುವ ಪರಿಣಾಮ ರಾಜ್ಯದಲ್ಲಿ ಮಳೆ ವಾತಾವರಣ ಕಂಡು ಬಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.