ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 23ರಂದು ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜುಲೈ 22 : ಬೆಂಗಳೂರು ನಗರದಲ್ಲಿ ಜುಲೈ 23ರಂದು ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗ್ಗೆ ನಗರದಲ್ಲಿ ಭಾರಿ ಮಳೆಯಾಗಿತ್ತು.

Recommended Video

America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಕೊಡಗಿನಲ್ಲೀಗ ಮಳೆ; ಎಲ್ಲೆಲ್ಲೂ ಭತ್ತ ನಾಟಿಯ ಸುಂದರ ದೃಶ್ಯ ಕೊಡಗಿನಲ್ಲೀಗ ಮಳೆ; ಎಲ್ಲೆಲ್ಲೂ ಭತ್ತ ನಾಟಿಯ ಸುಂದರ ದೃಶ್ಯ

ಬೆಂಗಳೂರು ನಗರದಲ್ಲಿ ಸೋಮವಾರ ರಾತ್ರಿ, ಮಂಗಳವಾರ ಮುಂಜಾನೆ ಭಾರಿ ಮಳೆಯಾಗಿತ್ತು. ಮಂಗಳವಾರ ನಗರದಲ್ಲಿ ಭಾರಿ ಬಿಸಿಲು ಇತ್ತು. ಬುಧವಾರ ಸಹ ಸುಡುವ ಬಿಸಿಲು ಇದ್ದು, ಉಷ್ಣಾಂಶ 30 ಡಿಗ್ರಿಗೆ ಏರಿಕೆಯಾಗಿದೆ.

 ಯಾದಗಿರಿಯಲ್ಲಿ ಧಾರಾಕಾರ ಮಳೆ; ಗೋಡೆ ಕುಸಿದು ಮಹಿಳೆ ಸಾವು ಯಾದಗಿರಿಯಲ್ಲಿ ಧಾರಾಕಾರ ಮಳೆ; ಗೋಡೆ ಕುಸಿದು ಮಹಿಳೆ ಸಾವು

Heavy Rain Alert In Bengaluru On July 23

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆ

ಯೆಲ್ಲೊ ಅಲರ್ಟ್ : ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಕಲಬುರಗಿ, ಹಾವೇರಿ, ಬೀದರ್, ಬೆಳಗಾವಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು 'ಯೆಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ 7, ರಾಯಚೂರಲ್ಲಿ 5, ಬೆಳಗಾವಿಯಲ್ಲಿ 4, ಚನ್ನಪಟ್ಟಣ ಮತ್ತು ಹೊಸನಗರದಲ್ಲಿ 3, ಹಾವೇರಿ ಮತ್ತು ನರಗುಂದಲ್ಲಿ 3 ಸೆಂ. ಮೀ. ಮಳೆಯಾದ ವರದಿ ಬಂದಿದೆ.

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮಳೆ ಬಿಡುವು ನೀಡುತ್ತಿದ್ದಂತೆ ಕೃಷಿ ಚಟುವಟಿಕೆಗಳು ಬಿರುಸಾಗಿವೆ.

English summary
India Meteorological Department (IMD) issued heavy rain alert in Bengaluru city on July 23, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X