Bengaluru Rains: ಬೆಂಗಳೂರಿನಲ್ಲಿ ಮುಂದುವರೆದ ಭಾರೀ ಮಳೆ-ಸರ್ಕಾರದಿಂದ ಸಮಿತಿ ರಚನೆ
Bengaluru Rains: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮತ್ತೆ ಮುಂದುವರೆದಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗುತ್ತಲೇ ಇವೆ. ಮನೆಗಳು, ಕಟ್ಟಡಗಳ ಕುಸಿತ ಸೇರಿದಂತೆ ಬೃಹತ್ ಅಪಾರ್ಟ್‌ಮೆಂಟ್‌ಗಳು, ವಾಹನಗಳು ನೀರಿನಲ್ಲಿ ಮುಳುಗಿಹೋಗಿವೆ. ಇದೀಗ ಎಚ್ಚತ್ತ ಸರ್ಕಾರ ಸಮಿತಿಯೊಂದನ್ನಯ ರಚನೆ ಮಾಡಿದೆ.
ಭಾರೀ ಮಳೆಯಿಂದ ಬೆಂಗಳೂರು ನಗರ ಜನರು ದೊಡ್ಡ ಸವಾಲುಗಳನ್ನು ಎದುರಿಸುವಂತಾಗಿದೆ. 92ರಿಂದ 157 ಮಿಲಿ ಮೀಟರ್ ಭಾರೀ ಮಳೆಯಾಗಿದ್ದು, ಇದರಿಂದ ಇಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗೆ ನಿರಂತರ ಮಳೆ ಸುರಿದ ಪರಿಣಾಮ ವಿವಿಧ ಉದ್ಯಮಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಈ ಬಗ್ಗೆ ಗಮನಹರಿಸಿದ ಸರ್ಕಾರ ಸಮಿತಿ ರಚನೆ ಮಾಡಿದೆ.

ಈಗಿನ ಬೆಂಗಳೂರಿನ ಪರಿಸ್ಥಿತಿಯನ್ನು ಅರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಐಟಿ, ಬಿಟಿ ಮತ್ತು ಸ್ಟಾರ್ಟ್ ಅಪ್ ವಿಷನ್ ಗ್ರೂಪ್‌ಗಳ ಮುಖ್ಯಸ್ಥರನ್ನು ಸಹ ಒಳಗೊಂಡಿದೆ.
ನಮ್ಮ ಮೂಲಸೌಕರ್ಯವನ್ನು ಬಲಪಡಿಸಲು ತಕ್ಷಣ ಅಲ್ಪಾವಧಿ ಮತ್ತು ದೀರ್ಘಾವಧಿಯ ಪರಿಹಾರಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲದೆ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಕಾರ್ಯಗತಗೊಳಿಸಲು ನಾವು ಕೈಗಾರಿಕೆಗಳು, ಕಾರ್ಪೊರೇಟ್‌ಗಳು, ಉದ್ಯಮ ಸಂಘಗಳು, ವಿವಿಧ ಸಂಘಗಳಳನ್ನು ಭೇಟಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ಪೋಸ್ಟರ್ ಅನ್ನು ಪ್ರಿಯಾಂಕ ಖರ್ಗೆ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸಮಿತಿ ರಚನೆ ಹೀಗಿದೆ
ಅಧ್ಯಕ್ಷರು-ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್
ಉಪಾಧ್ಯಕ್ಷರು - ಮಾನ್ಯ ಮಂತ್ರಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
ಸದಸ್ಯರು-ಕಿಯೋನಿಕ್ಸ್ ಅಧ್ಯಕ್ಷರು, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂ ಮುಖ್ಯ ಆಯುಕ್ತರು, ಬೆಂಗಳೂರು ಪೊಲೀಸ್ ಆಯುಕ್ತರು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳು, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳು.
ಸದಸ್ಯ ಕಾರ್ಯದರ್ಶಿ-ಬಿಬಿಎಂಪಿ ಪ್ರಧಾನ ಅಭಿಯಂತರರು.
ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದಾಗಿ ನೆಲಮಂಗಲ ರಸ್ತೆಯ ಚಿಕ್ಕಿಬಿದರಕಲ್ಲು ಗ್ರಾಮದ ಬಳಿ ಸೇತುವೆ ಕುಸಿತವಾಗಿದೆ. ಗ್ರಾಮದ ರಾಮನ ದೇವಾಲಯಕ್ಕೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದ ಸೇತುವೆ ಕುಸಿಸಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದ್ದಾರೆ.












Click it and Unblock the Notifications