Breaking; ಬೆಂಗಳೂರು ನಗರದಲ್ಲಿ ಮತ್ತೆ ಮಳೆ, ಜನರ ಪರದಾಟ
ಬೆಂಗಳೂರು, ಸೆಪ್ಟೆಂಬರ್ 06: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತೆ ಸಂಜೆ ಮಳೆ ಆರಂಭವಾಗಿದೆ. ಮಂಗಳವಾರ ಸಂಜೆ ನಗರದ ವಿವಿಧ ಬಡಾವಣೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.
ಕಳೆದ ವಾರದಿಂದ ಸಂಜೆ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಸಂಜೆ ಆರಂಭವಾದ ಮಳೆ ತಡರಾತ್ರಿ ತನಕ ಸುರಿದು ಜನರಿಗೆ ಸಂಕಷ್ಟ ತರುತ್ತಿದೆ. ಮಂಗಳವಾರ ಸಂಜೆಯೂ ನಗರದಲ್ಲಿ ಮಳೆಯಾಗುತ್ತಿದೆ.

ಜಯನಗರ, ಬಸನವಗುಡಿ, ಶಾಂತಿನಗರ, ಅಶೋಕ ಪಿಲ್ಲರ್, ಹನುಮಂತನಗರ, ಮೈಸೂರು ರಸ್ತೆ, ಬಿಟಿಎಂ ಲೇಔಟ್, ಮಡಿವಾಳ, ಇಂದಿರಾ ನಗರ, ಜೆ. ಪಿ. ನಗರ, ಜೆ. ಸಿ. ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆ ಸುರಿಯುತ್ತಿದೆ.
#WATCH | Heavy rain continues to lash Bengaluru, amid a 'Yellow' alert issued for today
— ANI (@ANI) September 6, 2022
IMD forecast shows no respite from rains for the next 2-3 days pic.twitter.com/Cv1rWvoBD7
ಬೆಂಗಳೂರು ನಗರದಲ್ಲಿ ಮಂಗಳವಾರವೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಗರದ ಪೂರ್ವ ವಲಯದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬುಧವಾರ ರಜೆ ಘೋಷಣೆ ಮಾಡಿ ಬಿಇಓ ಆದೇಶ ಹೊರಡಿಸಿದ್ದಾರೆ. ಮಳೆ ಮತ್ತು ರಸ್ತೆಗಳು ಜಲಾವೃತಗೊಂಡ ಹಿನ್ನಲೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ಪೂರ್ವ ತಾಲೂಕಿನ ಪೂರ್ವ ತಾಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಜೊತೆಗೆ ಮುಂದಿನ 2 ಶನಿವಾರ ಪೂರ್ಣ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.
ಬುಧವಾರ ಸಚಿವರ ಸಭೆ; ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗಳು ಉಂಟಾಗುತ್ತಿವೆ ಐಟಿಬಿಟಿ ಕಂಪನಿಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿವೆ. ಈ ಹಿನ್ನಲೆಯಲ್ಲಿ ಸಚಿವರು ಐಟಿಬಿಟಿ ಕಂಪನಿಗಳ ಜೊತೆ ಸಭೆ ನಡೆಸಲಿದ್ದಾರೆ.
ಐಟಿ-ಬಿಟಿ ಕಂಪನಿಗಳ ಮುಖ್ಯಸ್ಥರ ಜೊತೆ ಐಟಿಬಿಟಿ ಖಾತೆ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಚರ್ಚೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5ಗಂಟೆಗೆ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ಬೆಂಗಳೂರು ಪೊಲೀಸ್ ಆಯುಕ್ತರು ಸಹ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications