ಬೆಂಗಳೂರಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಆಗಸ್ಟ್ 8: ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ.
ಆದರೆ ಬೆಂಗಳೂರು ಹೊರ ವಲಯದಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 25.2 ಡಿಗ್ರಿ ಸೆಲ್ಸಿಯಸ್, ಗರಿಷ್ಠ 20.8 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 25.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಇಡೀ ಕರ್ನಾಕಾದ್ಯಂತ ಮುಂದಿನ 48 ಗಂಟೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಭಾಗಮಂಡಲ, ಕೊಟ್ಟಿಗೆಹಾರ, ಹೊಸನಗರ, ಕೊಲ್ಲೂರು, ಶಿವಮೊಗ್ಗ, ಯಲ್ಲಾಪುರ, ಹುಂಚದಕಟ್ಟೆ, ಪೊನ್ನಂಪೇಟೆ, ಕಮ್ಮರಡಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಇನ್ನು ನಾಪೊಕ್ಲು , ಸುಬ್ರಹ್ಮಣ್ಯ, ಶೃಂಗೇರಿ, ಕೊಪ್ಪ, ಖಾನಾಪುರ, ಬೆಳಗಾವಿ, ಹಳಿಯಾಳ, ವಿರಾಜಪೇಟೆ, ಜಯಪುರ, ಕಿತ್ತೂರು, ವಿಜಯಪುರದಲ್ಲೂ ಕೂಡ ಮಳೆಯಾಗಿದೆ.
ಉತ್ತರ ಕರ್ನಾಟಕ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಆಗುವ ಹಾನಿಯ ತೀವ್ರತೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಂದಿನ ಮೂರು ದಿನಗಳಲ್ಲಿ ಜಿಲ್ಲೆಗೆ ಯಾರೂ ಬರಬೇಡಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.












Click it and Unblock the Notifications