Rain: ಬೆಂಗಳೂರಿನಲ್ಲಿ ಮತ್ತೆ ಮಳೆ ಶುರು: ಮನೆಗೆ ಬೇಗ ಹೋಗಿಬಿಡಿ...

ಬೆಂಗಳೂರು ಅಕ್ಟೋಬರ್ 4: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನವೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಜೋರಾಗಿದೆ. ಮಧ್ಯಾಹ್ನ ಕವಿದ ಮೋಡ ಪ್ರಸ್ತುತ ಸಿಲಿಕಾನ್ ಸಿಟಿಯನ್ನೇ ತಂಪಾಗಿಸಿದೆ. ಅಕ್ಟೋಬರ್ ತಿಂಗಳಲ್ಲಿ ಆದ ಅತೀ ಹೆಚ್ಚು ಮಳೆ ಇದಾಗಿದೆ.

ಹೌದು... ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳ ಆರಂಭದಿಂದಲೇ ಮಳೆ ಹೆಚ್ಚಾಗಿದೆ. ಮಧ್ಯಾಹ್ನ, ಸಂಜೆ, ರಾತ್ರಿ ಎನ್ನದೇ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುತ್ತಿದೆ. ಪ್ರಸ್ತುತ ನಗರದ ಮೆಜೆಸ್ಟಿಕ್, ಜಯನಗರ, ವಿಜಯನಗರ, ಶಾಂತಿನಗರ, ಸುಂಕದಕಟ್ಟೆ, ರಾಜಾಜಿನಗರ, ಕೆಆರ್‌ ಮಾರುಕಟ್ಟೆ, ಗಾಂಧಿ ಬಜಾರ್, ರಾಜರಾಜೇಶ್ವರಿ ನಗರ, ಜಾಲಹಳ್ಳಿ, ಕೋರಮಂಗಲ ಮತ್ತಿತರ ಕಡೆ ಮಳೆ ಅಬ್ಬರಿಸುತ್ತಿದೆ.

heavy rain in bengaluru IMD has warned of heavy rain in 5 days

ಮಳೆ ಅರ್ಭಟಕ್ಕೆ ಅಲ್ಲಲ್ಲಿ ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಸಂಜೆವರೆಗೂ ಮಳೆ ಮುಂದುವರೆಯುವ ಲಕ್ಷಣವಿದ್ದು ಕಪ್ಪು ಮೋಡ ಆವರಿಸಿದೆ.ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಧಿಕ
ಹವಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಮಳೆ ರಾಜ್ಯದೆಲ್ಲೆಡೆ ಅಧಿಕವಾಗಲಿದೆ. ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೋಲಾರ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮೈಸೂರು, ದಾವಣಗೆರೆ, ಕೊಡಗು ಹಾಗೂ ಹಾಸನದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ತುಂತುರು ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಅಧಿಕ ಮಳೆಯಾಗುವ ಸಂಭವವಿದೆ. ಸತತ ಮೂರು ವರ್ಷಗಳಿಂದ ಅಂದರೆ 2021ರಿಂದ 2023ರವರೆಗೆ ಮಳೆಗಾಲದ ನಾಲ್ಕು ತಿಂಗಳಲ್ಲಿ (ಜೂ.1ರಿಂದ ಸೆಪ್ಟಂಬರ್ 30ರವರೆಗೆ) ಮಳೆಯ ಕೊರತೆ ಅನುಭವಿಸಿದ್ದ ಉಡುಪಿ ಜಿಲ್ಲೆಯಲ್ಲಿ 2024ರಲ್ಲಿ ಮೊದಲ ಬಾರಿ ಅಧಿಕ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+