Heavy Rain in Bengaluru: ಬೆಂಗಳೂರು ವೆದರ್ ರಿಪೋರ್ಟ್: ಧಾರಾಕಾರ ಮಳೆ - 2 ದಿನ ಆರೆಂಜ್‌ ಅಲರ್ಟ್!

Heavy Rain in Bengaluru: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರಿನ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ಇನ್ನೊಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ವಾರದಿಂದಲೂ ಬಿಸಿಲ ಝಳ ತೀವ್ರವಾಗಿತ್ತು. ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು. ಇನ್ನೊಂದು ವಾರಗಳ ಕಾಲ ಮಳೆಯಾಗಲಿದೆ. ಅಲ್ಲದೆ ಈ ವಾರ ನಗರದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನಗಳ ಕಾಲ ಐಎಂಡಿಯಿಂದ ಆರೆಂಜ್‌ ಅಲರ್ಟ್‌ ಸಹ ನೀಡಲಾಗಿದೆ.

ನಗರದಲ್ಲಿ ಮಳೆ ಬೀಳುತ್ತಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಮರಗಳ ಕೆಳಗೆ ನಿಲ್ಲಬೇಡಿ ಎನ್ನುವುದು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುಂಜಾಗ್ರತೆಗಳನ್ನು ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಳೆ ತುಸು ಬಿಡುವು ನೀಡಿತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಳ್ಳಲಿದೆ. ಅಲ್ಲದೇ ಮೇ 7 & 8ರಂದು ನಗರದಲ್ಲಿ ಭಾರೀ ಮಳೆಯಾಗಲಿದೆ. ಈ ವಾರದಲ್ಲಿ ನಗರದಲ್ಲಿ ಮಿಂಚು - ಗುಡುಗು ಸಹಿತ ಹಾಗೂ ಆಲಿಕಲ್ಲು ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಚುರುಕು ಪಡೆದುಕೊಂಡಿರುವ ಪ್ರಮಾಣ ಮಳೆಯಾಗುತ್ತಿದೆ.

Heavy Rain in Bengaluru Weather Report Orange Alert for 2 Days

ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಬೀಳುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿತ್ತು. ಆದರೆ, ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿ ವಾತಾವರಣ ಹೇಗಿರಲಿದೆ ?

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಮೋಡಕವಿದ ವಾತಾವರಣ ಇರಲಿದೆ. ನಗರದಲ್ಲಿ ಮುಂದಿನ 24 ಗಂಟೆ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು. ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಗಾಳಿಯ ವೇಗವು ಪ್ರತಿ ಕಿ.ಮೀಗೆ 33 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು. ಹಗುರದಿಂದ ಕೂಡಿದ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಉಳಿದಂತೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಯಥಾಸ್ಥಿತಿ ಇರಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಬದಲಾದ ವಾತಾವರಣ: ಇನ್ನು ಬೆಂಗಳೂರಿನಲ್ಲಿ ವಾತಾವರಣ ಬದಲಾಗಿದೆ. ಕಳೆದ ಎರಡು ವಾರದಿಂದಲೂ ಬೆಂಗಳೂರಿನಲ್ಲಿ ಬಿಸಿಲ ಝಳ ತೀವ್ರವಾಗಿತ್ತು. ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ ಬೆಂಗಳೂರಿನಲ್ಲಿ ಮಳೆಯಾಗಿರಲಿಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+