Bengaluru Rain: ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು; ಟ್ರಾಫಿಕ್ ಜಾಮ್, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಶನಿವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ನಾಗರಿಕರು ತತ್ತರಿಸಿದರು. ವ್ಯಾಪಕ ಮಳೆ ಸುರಿದ ಕಾರಣ ನಗರದಲ್ಲಿ ಹಲವು ಅವಾಂತರ ಸೃಷ್ಟಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವು ಮನೆಗಳಲ್ಲಿ ನೀರು ನಿಂತು ಜನ ಪರದಾಡಿದರು. ಯಲಹಂಕ ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದರೆ, ಎಲೆಕ್ಟ್ರಾನಿಕ್ ಸಿಟಿಯ ಹಲವು ಕಡೆಗಳಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬೆಂಗಳೂರಿನ 3 ಪ್ರದೇಶಗಳಲ್ಲಿ 100 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗಿದೆ. ಬಸವೇಶ್ವರ ನಗರದಲ್ಲಿ 109.50 ಮಿ.ಮೀ, ನಾಗಪುರದಲ್ಲಿ 104 ಮಿ.ಮೀ, ಹಂಪಿನಗರದಲ್ಲಿ 102 ಮಿ.ಮೀ ಮಳೆಯಾಗಿದೆ. ಶನಿವಾರ ರಾತ್ರಿ ನಗರದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದ್ದು, ಹಾನಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

heavy rain in benguru affects traffic and waterlogging

ಹಲವು ಕಡೆ ಟ್ರಾಫಿಕ್ ಜಾಮ್

ನಗರದಲ್ಲಿ ಭಾರಿ ಮಳೆಯಾದ ಕಾರಣ, ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಕ.ಆರ್. ಮಾರ್ಕೆಟ್ ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನಗಳು ಸರಾಗವಾಗಿ ಚಲಿಸಲು ಸಮಸ್ಯೆ ಉಂಟಾಗಿತ್ತು. ಸ್ಯಾಂಕಿ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡಿದರು.

ಬಳ್ಳಾರಿ ರಸ್ತೆಯಲ್ಲಿ ಕೂಡ ನೀರು ನಿಂತ ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್ ಮತ್ತು ಟೌನ್ ಹಾಲ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ರಸ್ತೆಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಗಿತ್ತು.

ಇನ್ನು ಭಾರಿ ಮಳೆಯಿಂದಾಗಿ ಹೊಸೂರು ಬೆಂಗಳೂರು ಮುಖ್ಯರಸ್ತೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ನೀರು ನಿಂತಪರಿಣಾಮ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪ್ರತಿ ಬಾರಿ ಮಳೆ ಬಂದಾಗಲೂ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿಯ ನೀರಿನಲ್ಲಿ ಕಾರುಗಳು ಮುಳುಗಿವೆ. ಎಲೆಕ್ಟ್ರಾನಿಕ್ ಸಿಟಿಯಿಂದ ಹೆಬ್ಬಗೋಡಿಗೆ ಮಧ್ಯೆ ಬರುವ ವೀರಸಂದ್ರದಲ್ಲಿ ಹಲವು ವರ್ಷಗಳಿಂದ ಇದೇ ಪರಿಸ್ಥಿತಿ ಇದ್ದರೂ ಹೆದ್ದಾರಿ ಪ್ರಾದಿಕಾರ ಮಾತ್ರ ಡೋಂಟ್ ಕೇರ್ ಎನ್ನುತ್ತಿದೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ.

ಭಾನುವಾರ ಕೂಡ ಭಾರಿ ಮಳೆ ಎಚ್ಚರಿಕೆ

ವಾರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ವಾಹನ ಸವಾರರು ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೆ ಸಿಲುಕಿದರು. ಭಾನುವಾರ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ಟೋಬರ್ 9ರವರೆಗೂ ನಗರದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+