ಬೆಂಗಳೂರು ನಗರದಲ್ಲಿ ಅಬ್ಬರಿಸಿದ ಮಧ್ಯಾಹ್ನದ ಮಳೆ

ಬೆಂಗಳೂರು, ನವೆಂಬರ್ 16: ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ ಮಳೆ ಅಬ್ಬರಿಸಿದೆ. ಸುಮಾರು ಎರಡು ತಾಸುಗಳ ಕಾಲ ಮಳೆ ಸುರಿದಿದ್ದು, ನಗರದ ಉಷ್ಣಾಂಶ ಕುಸಿತವಾಗಿದೆ, ಚಳಿಯ ವಾತಾವರಣ ನಿರ್ಮಾಣವಾಗಿದೆ.

ಸೋಮವಾರ ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಸುರಿದಿದೆ. ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದರು.

ಸದಾಶಿವನಗರ, ಮೇಕ್ರಿ ಸರ್ಕಲ್, ಸಂಜಯ ನಗರ, ಜೆ. ಸಿ. ನಗರ, ಆರ್. ಟಿ. ನಗರ, ಯಶವಂತಪುರ, ನಂದಿನಿ ಲೇಔಟ್, ಜಯನಗರ, ಬನಶಂಕರಿ, ವಿದ್ಯಾಪೀಠ, ಬಸವನಗುಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ.

Heavy Rain Lashes Bengaluru City Monday Evening

ರಭಸವಾಗಿ ಮಳೆ ಸುರಿದಿದ್ದರಿಂದ ದ್ವಿಚಕ್ರ ವಾಹನ ಸವಾರರು ಪರದಾಡಿದರು. ಅಂಡರ್‌ ಪಾಸ್‌ಗಳಲ್ಲಿ ನೀರು ತುಂಬಿಕೊಂಡಿತು. ಹಲವಾರು ರಸ್ತೆಗಳು ಜಲಾವೃತಗೊಂಡು ವಾಹನ ಸವಾರರಿಗೆ ತೊಂದರೆ ಉಂಟಾಯಿತು.

ಸೋಮವಾರ ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆ ಕಾರ್ಮೋಡ ಕವಿದು ಮಳೆ ಆರಂಭವಾಯಿತು. ಮೆಜೆಸ್ಟಿಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ಮಂದಗತಿಯಲ್ಲಿದೆ.

ಭಾನುವಾರ ಸಹ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿತ್ತು. ದೀಪಾವಳಿ ಹಬ್ಬದಂದು ದೀಪ, ಪಟಾಕಿ ಹಚ್ಚುವ ಜನರ ಉತ್ಸಾಹಕ್ಕೆ ಮಳೆ ತಣ್ಣೀರು ಸುರಿದಿತ್ತು. ಇನ್ನೂ ಎರಡು ದಿನಗಳ ಕಾಲ ನಗರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+