ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ, ಸಂಚಾರ ಅಸ್ತವ್ಯಸ್ತ

|
Google Oneindia Kannada News

ಬೆಂಗಳೂರು, ಮೇ 07 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಬಾರಿ ಮಳೆಯಾಗಿದೆ. ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಿಂದಾಗಿ ನಗರದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.

ಮಂಗಳವಾರ ಸಂಜೆ 7.30ರ ಸುಮಾರಿಗೆ ಬೆಂಗಳೂರು ನಗರದಲ್ಲಿ ಬಾರಿ ಮಳೆಯಾಗಿದೆ. ಸುಮಾರು 20 ನಿಮಿಷಗಳ ಕಾಲ ಗುಡುಗು ಸಹಿತ ಮಳೆಯಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಬೆಂಗಳೂರಲ್ಲಿ ಒಂದೇ ಒಂದು ಮಳೆ, ಗರಿಷ್ಠ ತಾಪಮಾನದಲ್ಲಿ ಭಾರಿ ಇಳಿಕೆಬೆಂಗಳೂರಲ್ಲಿ ಒಂದೇ ಒಂದು ಮಳೆ, ಗರಿಷ್ಠ ತಾಪಮಾನದಲ್ಲಿ ಭಾರಿ ಇಳಿಕೆ

Heavy rain lashes Bengaluru May 7 evening

ಮಳೆಯ ಜೊತೆ ಬಾರಿ ಗಾಳಿ ಬೀಸಿದ್ದು ಹಲವು ಪ್ರದೇಶದಲ್ಲಿ ಮರಗಳು ಧರೆಗುರುಳಿವೆ. ವಿವಿಧ ಬಡಾವಣೆಗಳಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಅತಿವೃಷ್ಠಿ ಅನಾಹುತ ಎದುರಿಸಲು ಕೊಡಗು ಜಿಲ್ಲಾಡಳಿತ ಸನ್ನದ್ಧಅತಿವೃಷ್ಠಿ ಅನಾಹುತ ಎದುರಿಸಲು ಕೊಡಗು ಜಿಲ್ಲಾಡಳಿತ ಸನ್ನದ್ಧ

ಮಂಗಳವಾರ ಸಂಜೆ 4 ಗಂಟೆ ವೇಳೆಗೆ ನೆಲಮಂಗಲ ಸೇರಿದಂತೆ ನಗರದ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದೊಳಗೆ ತುಂತುರು ಮಳೆಯಾಗುತ್ತಿತ್ತು. 7.30ರ ವೇಳೆಗೆ ನಗರದೊಳಗೂ ಬಾರಿ ಮಳೆಯಾಯಿತು.

ಕೃಪೆ ತೋರಿದ ವರುಣ:ಹಸಿರಿನಿಂದ ಕಂಗೊಳಿಸುತ್ತಿರುವ ಬಂಡೀಪುರಕೃಪೆ ತೋರಿದ ವರುಣ:ಹಸಿರಿನಿಂದ ಕಂಗೊಳಿಸುತ್ತಿರುವ ಬಂಡೀಪುರ

ಯಶವಂತಪುರ, ಜಯನಗರ, ಬಸವನಗುಡಿ, ಕತ್ರಿಗುಪ್ಪೆ, ಕೋರಮಂಗಲ, ರಾಜಾಜಿನಗರ, ಗಿರಿನಗರ, ಮೆಜೆಸ್ಟಿಕ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬಾರಿ ಮಳೆಯಾಗಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ತುಂಬಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಿತ್ರದುರ್ಗ ಜಿಲ್ಲೆಯಲ್ಲಿ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿತ್ತು.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಮಳೆಗೆ ಅಪಾರ ಹಾನಿಯಾಗಿದೆ. ಅಲಿಕಲ್ಲು ಬಿದ್ದಿದ್ದು, ಗಾಳಿ ಜೋರಾಗಿ ಬೀಸಿದ್ದರಿಂದ ತರಕಾರಿ ಬೆಳೆಯಲು ಹಾಕಿದ್ದ ಶೆಡ್‌ಗಳಿಗೆ ಹಾನಿಯಾಗಿದೆ.

English summary
Bengaluru witnessed heavy rain on Tuesday, May 7, 2019 evening forcing the temperature to drop in several parts of the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X