ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆರಂಭ
ಬೆಂಗಳೂರು, ಅ.16 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಮೂರನೇ ದಿನವೂ ಮಳೆ ಆರಂಭವಾಗಿದೆ. ಮಳೆಯಿಂದಾಗಿ ಹಲವು ಕಡೆ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದಾರೆ.
ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಅರ್ಭಟ ಮುಂದುವರಿಕೆ
ಬುಧವಾರ ರಾತ್ರಿ 8 ಗಂಟೆ ವೇಳೆಗೆ ಮಳೆ ಆರಂಭವಾಗಿದೆ. ಮೆಜೆಸ್ಟಿಕ್, ಶಿವಾನಂದ ವೃತ್ತ, ಶಾಂತಿನಗರ, ಮಾರ್ಕೆಟ್, ಚಾಮರಾಜಪೇಟೆ, ನಂದಿನಿ ಲೇಔಟ್, ತ್ಯಾಗರಾಜನಗರ, ಗಿರಿನಗರ, ಜೆ.ಪಿ.ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಮಳೆಯಾಗುತ್ತಿದೆ.
ಸಕಲ ಸಮಸ್ಯೆಗಳ ಪರಿಹಾರಕ್ಕೆ ಬಳಸಿ ಬಿಬಿಎಂಪಿ ಆಪ್
ದಕ್ಷಿಣ ಕರಾವಳಿ ಹಾಗೂ ಲಕ್ಷದ್ವೀಪ ಸುತ್ತಲಿನ ಭಾಗಗಳಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ಮಳೆ ಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುತ್ತಿದೆ.
ಮೇಲ್ಮೈ ಸುಳಿಗಾಳಿಯ ಪ್ರಭಾವ ಹೆಚ್ಚಾದರೆ ಇನ್ನೂ ಎರಡು ದಿನಗಳ ಕಾಲ ರಾತ್ರಿ ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇಲಾಖೆ ಮಾಹಿತಿ ಪ್ರಕಾರ ಆ.14ರಂದು ನಗರದಲ್ಲಿ 128 ಮಿ.ಮೀ.ಮಳೆಯಾಗಿದೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಬಡಾವಣೆಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು. ಮಂಗಳವಾರ ರಾತ್ರಿಯೂ ಅಲ್ಲಲ್ಲಿ ಮಳೆಯಾಗಿತ್ತು.
ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !