ಕರ್ನಾಟಕದಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು, ಸೆ.20 : ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯಕ್ಕೆ ಕಾಲಿಟ್ಟಿದ್ದಾನೆ. ಬುಧವಾರ ರಾತ್ರಿಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದೆ. ಆದ್ದರಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಮುಂಗಾರಿನ ಪ್ರಭಾವ ಮೂರುದಿನಗಳ ವರೆಗೆ ಮುಂದುವರೆಯಲಿದ್ದು, ಹೆಚ್ಚಿನ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

ಇಲಾಖೆಯ ಮುನ್ಸೂಚನೆಯಂತೆ ನೈಋತ್ಯ ಮುಂಗಾರಿನ ಪ್ರಭಾವದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸುರಿಯದಿದ್ದರೂ, ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಉತ್ತರ ಕರ್ನಾಟಕ ಮತ್ತು ಕರಾವಳಿ ತೀರ ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ. ಕರಾವಳಿ ತೀರದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಪ್ರಮಾಣದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗಿದೆ. ಭಾಗಮಂಡಲ, ಆಗುಂಬೆಯಲ್ಲಿ 11 ಸೆಂ.ಮೀ., ಹಾಸನ, ಕೊಟ್ಟಿಗೆಹಾರ ಮತ್ತು ಸಕಲೇಶಪುರದಲ್ಲಿ 9 ಸೆಂ.ಮೀ., ಗುಲ್ಬರ್ಗಾ ಮತ್ತು ಮಧುಗಿರಿಯಲ್ಲಿ 7 ಸೆಂ.ಮೀ.ನಷ್ಟು ಮಳೆ ಸುರಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಶುಕ್ರವಾರ ಬೆಳಗ್ಗೆ ಮತ್ತೆ ಆಗಮಿಸಿದ್ದಾನೆ. ಶುಕ್ರವಾರ ಬೆಳಗ್ಗೆ ನಗರದಲ್ಲಿ ತುಂತುರು ಮಳೆಯಾಗಿದೆ. ನಗರದ ತುಂಬಾ ಮೋಡ ಕವಿದ ವಾತಾವರಣ ವಿದ್ದು, ಯಾವುದೇ ಕ್ಷಣದಲ್ಲಿ ಮಳೆ ಯಾಗುವ ಸಾಧ್ಯತೆ ಇದೆ.












Click it and Unblock the Notifications