ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17: ನಗರದಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಒಂದು ವಾರದಿಂದ ಬೆಂಗಳೂರಲ್ಲಿ ಪ್ರತಿ ದಿನ ಸಂಜೆ ಮಳೆ ಬರುತ್ತಿದ್ದು, ಕಳೆದ ಎರಡು ದಿನಗಳಿಂದ ಸ್ವಲ್ಪ ಕಡಿಮೆಯಾಗಿದೆ. ಆದರೆ ಗುರುವಾರ ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಾದ್ಯಂತ ಮತ್ತೆ ಮುಂಗಾರು ಚುರುಕಾಗಿದ್ದು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿತ್ತಿದ್ದು, ಬೆಂಗಳೂರಲ್ಲೂ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rain Predicted Tonight In Bengaluru

ಸತತ ಒಂದು ವಾರ ಮಳೆ ಸುರಿದ ಬಳಿಕ ಎರಡು ದಿನ ಸ್ವಲ್ಪ ಬಿಡುವು ಪಡೆದಿದ್ದ ಮಳೆರಾಯ ಮಂಗಳವಾರ ಏಕಾಏಕಿ ಸಂಜೆ 6 ಗಂಟೆ ಸುಮಾರಿಗೆ ಮತ್ತೆ ಬಂದಿದ್ದ. ಬನಶಂಕರಿ, ಜಯನಗರ, ಉತ್ತರ ಹಳ್ಳಿ, ಕೆಂಗೇರಿ, ಮೈಸೂರು ರಸ್ತೆ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿತ್ತು.

ಗುರುವಾರ ಬೆಳಗ್ಗೆಯಿಂದಲೂ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಮಳೆ ಮುಂದುರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಳಿಯು ಗಂಟೆಗೆ 11 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಶೇ.99ರಷ್ಟು ತೇವಾಂಶವೂ ದಾಖಲಾಗಿದೆ.

ರಾಜ್ಯಾದ್ಯಂತ ಐದು ದಿನಗಳ ಕಾಲ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂಗಾರು ಅಕ್ಟೋಬರ್ ಅಂತ್ಯದವರೆಗೂ ಮಳೆ ಮುಂದುವರೆಯಲಿದೆ. ಚಿಂತಾಮಣಿ, ಭಾಗಮಂಡಲ, ಮಂಗಳೂರು, ಪಣಂಬೂರ್, ಯಲಬುರ್ಗಾ, ಕುಷ್ಟಗಿಯಲ್ಲಿ ಹೆಚ್ಚು ಮಳೆಯಾಗಿದೆ.

English summary
Heavy Rain Predicted Tonight In Bengaluru, Karnataka, kerala, Mahareashtra are likely to recieve heavy rain fall Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X