Bengaluru Rain : ಬೆಂಗಳೂರು ನಗರದಲ್ಲಿ ಗುಡುಗು, ಮಳೆ ಆರ್ಭಟ
ಬೆಂಗಳೂರು, ಮೇ 04; ಉದ್ಯಾನ ನಗರಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗುಡುಗಿನ ಆರ್ಭಟವೂ ಹೆಚ್ಚಾಗಿದೆ. ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ.
ಮಂಗಳವಾರವೂ ನಗರದಲ್ಲಿ ಮಳೆಯಾಗಿತ್ತು. ಬುಧವಾರ ಸಂಜೆ 4 ಗಂಟೆ ಬಳಿಕ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಚೇರಿಯಿಂದ ಮನೆಗೆ ಹೊರಟವರು ಮಳೆಯಲ್ಲಿ ಸಿಲುಕಿದ್ದಾರೆ. ಕೆಲವು ಕಡೆ ಮಳೆ ನೀರು ರಸ್ತೆ ಮೇಲೆ ನಿಂತಿದೆ.

ಮೇ 7ರ ತನಕ ಬೆಂಗಳೂರು ನಗರದಲ್ಲಿ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬುಧವಾರ ಸಂಜೆ ಜಯನಗರ, ಹನುಂತನಗರ, ವಿದ್ಯಾಪೀಠ, ಬಸವನಗುಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.
ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ವಿಜಯನಗರ, ಕೋರಮಂಗಲ, ಜೆ. ಪಿ. ನಗರ, ಎಲೆಕ್ಟ್ರಾನಿಕ್ ಸಿಟಿ, ದೊಮ್ಮಲೂರು, ಮೆಜೆಸ್ಟಿಕ್ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ, ರಸ್ತೆಗಳು ಜಲಾವೃತವಾಗಿವೆ.
ಬೆಂಗಳೂರು ನಗರ ಮಾತ್ರವಲ್ಲ ಬುಧವಾರ ಕರ್ನಾಟಕ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರದಲ್ಲಿಯೂ ಮಳೆ ಸುರಿಯುತ್ತಿದೆ.












Click it and Unblock the Notifications