ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆ
ಬೆಂಗಳೂರು.ಮೇ. 7: ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ತೀರ ಪ್ರದೇಶದಲ್ಲಿ 45-55 ಕಿ.ಮೀ ವೇಗದಲ್ಲಿ ಪ್ರಬಲವಾದ ಗಾಳಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಬೀಸಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಘಟ್ಟ ಪ್ರದೇಶ, ಈ ಹಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಜನತೆ ಎಚ್ಚರದಲ್ಲಿರುವಂತೆ ಇಲಾಖೆ ಹೇಳಿದೆ.
ಕಳೆದ ವಾರದಿಂದಲೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡದಲ್ಲಿ ಸಂಜೆ ಹೊತ್ತು ಭಾರೀ ಮಳೆಯಾಗುತ್ತಿದ್ದು ಮೂರು ದಿನಗಳ ಕಾಲ ಇದೇ ರೀತಿ ಹವಾಮಾನ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.[ವಾಲ್ಮೀಕಿ ಯಾರು? ಪುಸ್ತಕದ ವಿರುದ್ಧ ಭುಗಿಲೆದ್ದ ಆಕ್ರೋಶ]













Click it and Unblock the Notifications