ಮತ್ತಷ್ಟು ವಾಯುಭಾರ ಕುಸಿತ, ಬೆಂಗಳೂರಲ್ಲಿ 4 ದಿನ ಗುಡುಗು ಸಹಿತ ಮಳೆ
Recommended Video
ಬೆಂಗಳೂರು, ಅಕ್ಟೋಬರ್ 21: ಅರಬ್ಬಿ ಸಮುದ್ರದ ಪೂರ್ವ ಕೇಂದ್ರದಲ್ಲಿ 24 ಗಂಟೆಗಳಲ್ಲಿ ಮತ್ತಷ್ಟು ವಾಯುಭಾರ ಕುಸಿತ ಉಂಟಾಗಲಿದ್ದು, ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಸುಂದರ್ ಮೇತ್ರಿ ತಿಳಿಸಿದ್ದಾರೆ.
ಮುಂಗಾರು ಕಳೆದು ಹಿಂಗಾರು ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಈಗಾಗಲೇ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಳಿಯಾಳ, ಹಾವೇರಿ, ಶಿಗ್ಗಾವ್, ಬೆಳ್ತಂಗಡಿ, ಯಲ್ಲಾಪುರ, ಧರ್ಮಸ್ಥಳ, ಶೃಂಗೇರಿ, ಗೋಕರ್ಣ, ನಿಪ್ಪಾಣು, ಆಗುಂಬೆ, ಆನವಟ್ಟಿ, ಸುಬ್ರಹ್ಮಣ್ಯ, ಗೋಕಾಕ್, ಹುಕ್ಕೇರಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ 28.6 ಡಿಗ್ರ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 29.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.3 ಡಿಗ್ರಿ ಸಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications