ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತಷ್ಟು ವಾಯುಭಾರ ಕುಸಿತ, ಬೆಂಗಳೂರಲ್ಲಿ 4 ದಿನ ಗುಡುಗು ಸಹಿತ ಮಳೆ

|
Google Oneindia Kannada News

Recommended Video

Heavy Raining Again In The Belagavi District | Oneindia Kannada

ಬೆಂಗಳೂರು, ಅಕ್ಟೋಬರ್ 21: ಅರಬ್ಬಿ ಸಮುದ್ರದ ಪೂರ್ವ ಕೇಂದ್ರದಲ್ಲಿ 24 ಗಂಟೆಗಳಲ್ಲಿ ಮತ್ತಷ್ಟು ವಾಯುಭಾರ ಕುಸಿತ ಉಂಟಾಗಲಿದ್ದು, ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಸುಂದರ್ ಮೇತ್ರಿ ತಿಳಿಸಿದ್ದಾರೆ.

ಹಿಂಗಾರು ಆರಂಭ: ರಾಜ್ಯದಾದ್ಯಂತ ಇನ್ನೂ ಮೂರು ದಿನ ಭಾರಿ ಮಳೆಹಿಂಗಾರು ಆರಂಭ: ರಾಜ್ಯದಾದ್ಯಂತ ಇನ್ನೂ ಮೂರು ದಿನ ಭಾರಿ ಮಳೆ

ಮುಂಗಾರು ಕಳೆದು ಹಿಂಗಾರು ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

Heavy Rainfall 4-Day Thunder Showers In Bengaluru

ಈಗಾಗಲೇ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಳಿಯಾಳ, ಹಾವೇರಿ, ಶಿಗ್ಗಾವ್, ಬೆಳ್ತಂಗಡಿ, ಯಲ್ಲಾಪುರ, ಧರ್ಮಸ್ಥಳ, ಶೃಂಗೇರಿ, ಗೋಕರ್ಣ, ನಿಪ್ಪಾಣು, ಆಗುಂಬೆ, ಆನವಟ್ಟಿ, ಸುಬ್ರಹ್ಮಣ್ಯ, ಗೋಕಾಕ್, ಹುಕ್ಕೇರಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 28.6 ಡಿಗ್ರ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 29.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.3 ಡಿಗ್ರಿ ಸಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
A further windfall will occur in the central region of the Arabian Sea in 24 hours.Heavy Rainfall 4-Day Thunder Showers In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X