ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 21 : ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕಡಿಮೆಯಾಗಿದ್ದು, ಮಂಗಳವಾರ ಸಹ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Recommended Video
ಸೋಮವಾರ ಸಂಜೆ 4 ಗಂಟೆಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಮಿಂಚು ಸಹಿತ ಭಾರಿ ಮಳೆಯಾಗಿದೆ. ರಾತ್ರಿ 9 ಗಂಟೆಯಿಂದ 12 ಗಂಟೆ ತನಕ ಹೆಚ್ಚು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.
ಮಲ್ಲೇಶ್ವರ, ಯಶವಂತಪುರ, ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಮೈಸೂರು ರಸ್ತೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಲಾಕ್ ಡೌನ್ ಕಾರಣ ಹೆಚ್ಚು ವಾಹನ ಸಂಚಾರ ಇರಲಿಲ್ಲ. ಆದ್ದರಿಂದ, ಜನರು ಮಳೆಯಲ್ಲಿ ಸಿಲುಕಲಿಲ್ಲ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ)ದ ಮಾಹಿತಿಯಂತೆ ರಾತ್ರಿ 9 ಗಂಟೆ ತನಕ ಯಲಹಂಕ ವಲಯದಲ್ಲಿ ಅತಿ ಹೆಚ್ಚು ಅಂದರೆ 76.5 ಮಿ. ಮೀ. ಮಳೆಯಾಗಿದೆ.
ಬೆಂಗಳೂರು ನಗರದಲ್ಲಿ ಮಂಗಳವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾನುವಾರ ರಾತ್ರಿ, ಸೋಮವಾರ ನಗರದಲ್ಲಿ ಉತ್ತಮ ಮಳೆಯಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಳೆ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ.












Click it and Unblock the Notifications