ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜುಲೈ 21 : ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕಡಿಮೆಯಾಗಿದ್ದು, ಮಂಗಳವಾರ ಸಹ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Recommended Video

ದಕ್ಷಿಣ ಕನ್ನಡದಲ್ಲಿ ಮತ್ತೆ ಲಾಕ್ ಡೌನ್ !?

ಸೋಮವಾರ ಸಂಜೆ 4 ಗಂಟೆಯಿಂದ ನಗರದ ವಿವಿಧ ಬಡಾವಣೆಗಳಲ್ಲಿ ಮಿಂಚು ಸಹಿತ ಭಾರಿ ಮಳೆಯಾಗಿದೆ. ರಾತ್ರಿ 9 ಗಂಟೆಯಿಂದ 12 ಗಂಟೆ ತನಕ ಹೆಚ್ಚು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.

 ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾದ ಮಳೆ; ಕೆಆರ್ ಎಸ್ ಒಳಹರಿವು ಹೆಚ್ಚಳ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾದ ಮಳೆ; ಕೆಆರ್ ಎಸ್ ಒಳಹರಿವು ಹೆಚ್ಚಳ

ಮಲ್ಲೇಶ್ವರ, ಯಶವಂತಪುರ, ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಮೈಸೂರು ರಸ್ತೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಲಾಕ್ ಡೌನ್ ಕಾರಣ ಹೆಚ್ಚು ವಾಹನ ಸಂಚಾರ ಇರಲಿಲ್ಲ. ಆದ್ದರಿಂದ, ಜನರು ಮಳೆಯಲ್ಲಿ ಸಿಲುಕಲಿಲ್ಲ.

ಬೆಂಗಳೂರು ದಕ್ಷಿಣದಲ್ಲಿ 2,014 ಸಕ್ರಿಯ ಕಂಟೈನ್ಮೆಂಟ್ ಝೋನ್ ಬೆಂಗಳೂರು ದಕ್ಷಿಣದಲ್ಲಿ 2,014 ಸಕ್ರಿಯ ಕಂಟೈನ್ಮೆಂಟ್ ಝೋನ್

bengaluru rain

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ)ದ ಮಾಹಿತಿಯಂತೆ ರಾತ್ರಿ 9 ಗಂಟೆ ತನಕ ಯಲಹಂಕ ವಲಯದಲ್ಲಿ ಅತಿ ಹೆಚ್ಚು ಅಂದರೆ 76.5 ಮಿ. ಮೀ. ಮಳೆಯಾಗಿದೆ.

ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಬೆಂಗಳೂರು ನಗರದಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ

ಬೆಂಗಳೂರು ನಗರದಲ್ಲಿ ಮಂಗಳವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾನುವಾರ ರಾತ್ರಿ, ಸೋಮವಾರ ನಗರದಲ್ಲಿ ಉತ್ತಮ ಮಳೆಯಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಳೆ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ.

English summary
Heavy rain accompanied by lightning lashed several parts of Bengaluru city on July 20th night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X