Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ರಣಭೀಕರ ಮಳೆ!, IMD ಮುನ್ಸೂಚನೆ ಇಲ್ಲಿದೆ !

ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತಿದ್ದಂತೆಯೇ ಕರ್ನಾಟಕಕ್ಕೂ ಮಳೆ ಭರ್ಜರಿ ಎಂಟ್ರಿ ಕೊಟ್ಟಿದ್ದು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಸೋಮವಾರ ಬೆಳಗ್ಗೆಯೇ ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎಷ್ಟು ದಿನ ಭಾರೀ ಮಳೆ ಮುಂದುವರಿಯಲಿದೆ ಎನ್ನುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಮುಂದಿನ ಒಂದು ವಾರದ ಅವಧಿಯ ಹವಾಮಾನ ವರದಿ ಡೀಟೆಲ್ಸ್‌ ಇಲ್ಲಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸೋಮವಾರ ಮುಂಜಾನೆಯೇ ಜೋರಾದ ಮಳೆಯಾಗಿದ್ದು. ಕೆಲಸಕ್ಕೆ ಹೋಗುವವರು, ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡಿದರು. ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಎದುರಾಗಿತ್ತು. ನಗರದ ಹಲವು ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡಿದ್ದು ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Heavy rains continue in Bengaluru Here is IMD forecast

ಬೆಂಗಳೂರಿನಲ್ಲಿ ಇನ್ನೊಂದು ವಾರ ಮಳೆ: ಇನ್ನು ಬೆಂಗಳೂರಿನಲ್ಲಿ ಇನ್ನೊಂದು ವಾರಗಳ ಕಾಲ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಈ ಬಾರಿ ಮಳೆ ಮಾರ್ಚ್‌ನಿಂದಲೇ ಪ್ರಾರಂಭವಾಗಿದೆ. ಕಳೆದ ವರ್ಷ ನೀರಿಲ್ಲದೆ ಬೆಂಗಳೂರಿನಲ್ಲಿ ಭಾರೀ ಸಮಸ್ಯೆ ಆಗಿತ್ತು. ಆದರೆ, ಈ ಬಾರಿ ಮಾರ್ಚ್‌ಗೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆ ಆಗಲಿದೆ. ಅಲ್ಲದೇ ಈ ಬಾರಿ‌ ನೈಋತ್ಯ ಮಾನ್ಸೂನ್ ಅವಧಿಯು ಹೆಚ್ಚಾಗಿ ಇರಲಿದೆ ಎಂದು ಹೇಳಲಾಗಿದೆ. ಹೀಗಾಗಿ, ಈ ಬಾರಿ ಹೆಚ್ಚು ಮಳೆ ಆಗಲಿದೆ.

ಬೆಂಗಳೂರು ಹಾಗೂ ಕರ್ನಾಟಕಕ್ಕೆ ಕಳೆದ ಬಾರಿ ಮಾನ್ಸೂನ್ ತಡವಾಗಿ ಎಂಟ್ರಿಯಾಗಿತ್ತು. ಆದರೆ, ಈ ಬಾರಿ ಬೇಗ ಬಂದಿದೆ. ಅಲ್ಲದೇ ಮಾರ್ಚ್‌ನಲ್ಲಿಯೇ ಪೂರ್ವ ಮುಂಗಾರು ಅವಧಿಯಲ್ಲೂ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಈ ನಡುವೆ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೊಂದು ವಾರದ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಮುಂದಿನ ಮೂರು ದಿನಗಳ ಅವಧಿ ಉಷ್ಣಾಂಶ ಹೇಗೆ ಇರಲಿದೆ ?

ಇನ್ನು ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಉಷ್ಣಾಂಶ ಯಾವ ರೀತಿ ಇರಲಿದೆ ಎನ್ನುವ ಬಗ್ಗೆಯೂ ಭಾರತೀಯ ಹವಾಮಾನ ಇಲಾಖೆಯು ಅಪ್ಡೇಟ್ಸ್‌ ನೀಡಿದೆ. ಬೆಂಗಳೂರಿನಲ್ಲಿ ಇನ್ನೊಂದು ವಾರದ ಅವಧಿಗೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಅವಧಿಗೆ ಧಾರಾಕಾರ ಮಳೆ ಮುಂದುವರಿಯಲಿದೆ. ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದ್ದು. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಉಳಿದಂತೆ ಗಾಳಿಯ ವೇಗವು 40ರಿಂದ 50 ಕಿ.ಮೀ ಪ್ರತಿ ಗಂಟೆಗೆ ಇರಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+