Rain: ಬೆಂಗಳೂರಲ್ಲಿ ಮಳೆ: ಡಿ.ಕೆ ಶಿವಕುಮಾರ್‌ಗೆ "ಪ್ರವಾಹ ತೆರಿಗೆ" ಹಾಕಿ ಎಂದ ಜನ!

ಬೆಂಗಳೂರಿನಲ್ಲಿ ಗುರುವಾರ ಸಣ್ಣ ಮಳೆಯಾಗಿದ್ದು. ಸಣ್ಣ ಮಳೆಗೆ ಭಾರೀ ಆವಂತರ ಸೃಷ್ಟಿಯಾಗಿದೆ. ನಗರದ ಹಲವು ಭಾಗದಲ್ಲಿ ಸಣ್ಣ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆರೆಯಂತೆ ಬದಲಾಗಿದೆ. ಬೆಂಗಳೂರಿಗರು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇದರೊಂದಿಗೆ ಬಿಬಿಎಂಪಿಗೂ ಛೀಮಾರಿ ಹಾಕಿದ್ದಾರೆ. ಬೇಸಿಗೆ ಕಾಲದಲ್ಲಿ ಸುರಿದ ಸಣ್ಣ ಮಳೆಗೆ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಮರಗಳು ಧರೆಗುರುಳಿವೆ.

ಬೆಂಗಳೂರಿನಲ್ಲಿ ಎಲ್ಲಾ ಸೌಲಭ್ಯಗಳನ್ನೂ ನೀಡಲಾಗಿದೆ. ಹೀಗಾಗಿ ಎಲ್ಲರೂ ಆಸ್ತಿ ತೆರಿಗೆ ಪಾವತಿ ಮಾಡಬೇಕು ಎಂದು ಈಚೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದರು. ಆದರೆ, ಗುರುವಾರ ಒಂದೇ ಮಳೆಗೆ ಬೆಂಗಳೂರಿನಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದ್ದು. ಬಿಬಿಎಂಪಿ ಹಾಗೂ ಡಿ.ಕೆ ಶಿವಕುಮಾರ್‌ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

Heavy Rains in Bengaluru People ask DK Shivakumar to Impose Flood Tax

ಬ್ರ್ಯಾಂಡ್ ಬೆಂಗಳೂರಿನ ಬಣ್ಣ ಈಗ ಬಯಲಾಗಿದೆ. ಅರ್ಧಗಂಟೆ ಮಳೆಗೆ ಬೆಂಗಳೂರಿನಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ. ಬೆಂಗಳೂರಿನ ರಸ್ತೆಗಳು ನದಿಗಳಂತೆ ಬದಲಾಗಿವೆ. ಬೇಸಿಗೆ ಕಾಲದ ಮಳೆಗೆ ಈ ರೀತಿ ಅವಾಂತರ ಸೃಷ್ಟಿಯಾದರೆ, ಮುಂದೆ ಮಾನ್ಸೂನ್‌ ಪ್ರಾರಂಭವಾದರೆ ಪರಿಸ್ಥಿತಿ ಏನು ಎಂದು ಜನ ಪ್ರಶ್ನೆ ಮಾಡಿದ್ದಾರೆ.

Take a Poll

ಕರ್ನಾಟಕ ಸರ್ಕಾರದ ವರ್ಷಗಳ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ. ಬೆಂಗಳೂರು ಆಡಳಿತದಲ್ಲಿರುವ ಭ್ರಷ್ಟಾಚಾರವೇ ಇದಕ್ಕೆ ಕಾರಣ. ಬೃಹತ್ ಪ್ರಮಾಣದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ಮಾಡುತ್ತಿದೆ. ಆದರೆ, ಕನಿಷ್ಠ ಮೂಲಸೌಕರ್ಯವನ್ನು ಕಲ್ಪಿಸುವುದಕ್ಕೂ ಆಗುತ್ತಿಲ್ಲ. ಚರಂಡಿಗಳು ಹಾಳಾಗಿವೆ. ಸಣ್ಣ ಮಳೆಗೆ ಮೊಣಕಾಲಿನ ವರೆಗೆ ನೀರು ನಿಲ್ಲುತ್ತಿದೆ. ಜನ ಈ ಕೃತಕ ಪ್ರವಾಹದಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ನೇತೃತ್ವದ ಸರ್ಕಾರವು 'ಬ್ರ್ಯಾಂಡ್ ಬೆಂಗಳೂರು' ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಮಾಡುತ್ತಿರುವುದಾಗಿ ಹೇಳಿದೆ. ಆದರೆ, ಸಣ್ಣ ಮಳೆಗೆ ಈ ಅವಾಂತರ ಸೃಷ್ಟಿಯಾಗಿದೆ. ಬಹುಶಃ ಈ ಸರ್ಕಾರ ಇದಕ್ಕೂ ಪ್ರವಾಹ ಶುಲ್ಕ ಅಂತ ವಿಧಿಸಿದರೂ ವಿಧಿಸಬಹುದು ಎಂದು ಕೆಲವರು ವ್ಯಂಗ್ಯವಾಡಿದ್ದಾರೆ.

@BBMPCOMM ಮತ್ತು @DKShivakumar ಅವರು 'ಬ್ರ್ಯಾಂಡ್ ಬೆಂಗಳೂರು' ಹೆಸರಿನಲ್ಲಿ ಹೊಸ ಹೊಸ ಭರವಸೆಗಳನ್ನು ಕೊಡುತ್ತಿದ್ದಾರೆ. ಇಂತಹದ್ದೆಲ್ಲ ಬರೀ ಪ್ರಚಾರಕ್ಕೆ ಸೀಮಿತವಾಗಿವೆ. ಪ್ರಚಾರ ಹಾಗೂ ಹಣ ಪೋಲಾಗುವುದಕ್ಕೆ ಕಾರಣವಾಗುತ್ತಿದೆ. ಕೂಡಲೇ ಸರ್ಕಾರ ಹಾಗೂ ಬಿಬಿಎಂಪಿಯು ಬೆಂಗಳೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜನ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ 209 ಪ್ರವಾಹ ಪೀಡಿದ ಪ್ರದೇಶ!

ಇನ್ನು ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳ ಜೊತೆಗೆ ಹೊಸದಾಗಿ 11 ಪ್ರದೇಶಗಳು ಸೇರಿದಂತೆ ಒಟ್ಟು 209 ಪ್ರವಾಹ ಪೀಡಿದ ಪ್ರದೇಶಗಳಿವೆ. ಈ ಸಂಬಂಧ ಈಗಾಗಲೇ 166 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 43 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳು ಖುದ್ದು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+