Heavy Rain in Bengaluru: ಬೆಂಗಳೂರಿನಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ: IMD ಮುನ್ಸೂಚನೆ!

Heavy Rain in Bengaluru: ನೈಋತ್ಯ ಮಾನ್ಸೂನ್ ಮುಂಗಾರು ಪ್ರವೇಶಿಸುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿಯೂ ಇನ್ನೊಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶವಾಗಿದ್ದು. ಇದರ ಬೆನ್ನಲ್ಲೇ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೊಂದು ವಾರ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಮೇ ಅಂತ್ಯ ವರೆಗೆ ಬೆಂಗಳೂರಿನಲ್ಲಿ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27ಡಿಗ್ರಿ ಸೆಲ್ಸಿಯಸ್‌ ಹಾಗೂ 21ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ.

Heavy rains in Bengaluru till May 31st IMD forecast

ನಗರದಲ್ಲಿ ಕಳೆದ ವಾರ ಸುರಿದ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಮುಂದಿನ ದಿನಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹೇಳಿರುವುದು ತಗ್ಗು ಪ್ರದೇಶದಲ್ಲಿ ಇರುವವರಿಗೆ ಆತಂಕ ಮೂಡಿಸಿದೆ.

ಮೇ 30ರ ವರೆಗೆ ಮಳೆ: ನಗರದಲ್ಲಿ ಮೇ 30ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ತಿಂಗಳಂತ್ಯದ ವರೆಗೆ ಮಾತ್ರವಲ್ಲದೇ ಮೇ 31ರಿಂದ ಜೂನ್‌ 2 ರ ವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಳೆ ಇರಲಿದೆ. ಗಾಳಿಯ ವೇಗವು ಪ್ರತಿ ಕಿ.ಮೀ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ. ಇನ್ನು 48 ಗಂಟೆಯ ಅವಧಿಗೂ ಇದೇ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

ಮಾರ್ಚ್‌ 1ರಿಂದ ಧಾರಾಕಾರ ಮಳೆ: ಇನ್ನು ಬೆಂಗಳೂರಿನಲ್ಲಿ ಈ ಬಾರಿ ಮಾರ್ಚ್‌ 1ರಿಂದಲೇ ಭಾರೀ ಮಳೆಯಾಗುತ್ತಿದೆ. ಮಾರ್ಚ್ 1 ರಿಂದ ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಒಟ್ಟು 343 ಮಿ.ಮೀ (34.3 ಸೆಂ.ಮೀ) ಮಳೆಯಾಗಿದೆ. ಈ ಬಾರಿ ಮಾನ್ಸೂನ್ ರಾಜ್ಯಕ್ಕೆ ಶೀಘ್ರ ಪ್ರವೇಶಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಬಿಬಿಎಂಪಿ ಸಿದ್ಧತೆ: ಇನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ - ನೂತನ ಗ್ರೇಟರ್ ಬೆಂಗಳೂರು ಆಡಳಿತವೂ ಸಹ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಆಗುತ್ತಿರುವ ಪ್ರದೇಶಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+