ಬೆಂಗಳೂರಿನ ಬಹುತೇಕ ಕಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ

ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ ಬಿರುಗಾಳಿ, ಆಲಿಕಲ್ಲಿನಿಂದ ಕೂಡಿದ ಮಳೆ ಸುರಿಯುತ್ತಿದೆ.

Recommended Video

      ಭಾನುವಾರದ ಭಾರೀ ಮಳೆಗೆ ಬೆಂಗಳೂರು ತತ್ತರ | Bangalore Rain | Oneindia Kannada

      ನಗರದ ಬಹುತೇಕ ಕಡೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಸಕೆರೆಹಳ್ಳಿ, ಪದ್ಮನಾಭನಗರ, ಮಲ್ಲೇಶ್ವರ, ಕೆಂಗೇರಿ, ಉತ್ತರಹಳ್ಳಿ, ಮೈಸೂರು ರಸ್ತೆ, ಜಯನಗರದಲ್ಲಿ ಮಳೆಯಾಗುತ್ತಿದೆ.

      Heavy Rains With strong Winds and Hailstone In Bengaluru

      ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, , ಕೊಪ್ಪಳ, ರಾಯಚೂರು, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಮಂಡ್ಯ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ , ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      ಶನಿವಾರ ಸುಬ್ರಹ್ಮಣ್ಯ, ಬೇಲೂರು, ಶ್ರವಣಬೆಳಗೊಳ, ಅರಕಲಗೂಡಿನಲ್ಲಿ ಮಳೆಯಾಗಿದೆ.ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಇದೇ ವಾತಾವರಣ ಮುಂದುವರೆಯಲಿದ್ದು, ಮಳೆಯಾಗಲಿದೆ.

      ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ದೊರೆತಿದೆ.
      ಬೆಂಗಳೂರಿನ ಹಲವೆಡೆ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ 1 ಗಂಟೆಯಿಂದ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+