ಬಿಜೆಪಿಯ ಪರಿವರ್ತನಾ ಯಾತ್ರೆ ಎಫೆಕ್ಟ್, ಫುಲ್ ಟ್ರಾಫಿಕ್ ಜಾಮ್
ಬೆಂಗಳೂರು, ನವೆಂಬರ್ 02: ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ರಥಯಾತ್ರೆ ಎಫೆಕ್ಟ್ ನಿಂದಾಗಿ ತುಮಕೂರು ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ
ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ರಥಯಾತ್ರೆಗೆ ಇಂದು (ಗುರುವಾರ() ಚಾಲನೆ ಸಿಗಲಿದ್ದು, ಇದಕ್ಕಾಗಿ ರಾಜ್ಯದ ಮೂಲೆ-ಮೂಲೆಗಳಿಂದ ಬೈಕ್, ಕಾರ್ ಗಳ ಮೂಲಕ ಲಕ್ಷಾಂತರ ಮಂದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಜಾಮ್ ನಲ್ಲಿ ಆಂಬ್ಯುಲೆನ್ಸ್ ಸಹ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡಿರುವ ದೃಶ್ಯ ಕಂಡುಬಂದಿದೆ. ಇದಕ್ಕೆ ಸಾರ್ವಜನಿಕರು ಛೀ, ಥೂ ಅಂತ ಬಾಯಿಗೆ ಬಂದಂಗೆ ಉಗಿದಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನಕ್ಕೆ ಆಗಮಿಸುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೂ ಸಹ ಈ ಟ್ರಾಫಿಕ್ ಬಿಸಿ ತಟ್ಟಿದೆ. ಇದರಿಂದ ಅಮಿತ್ ಶಾ ಅವರನ್ನು ಹೆಲಿಕಾಪ್ಟರ್ ಮೂಲಕ ಕರೆತರಲಾಯಿತು.












Click it and Unblock the Notifications