ಬೆಂಗಳೂರು: ಮಾರತ್ತಹಳ್ಳಿಯ ಈ ರಸ್ತೆಯಲ್ಲಿ BMTC ಸೇರಿದಂತೆ ಭಾರಿ ವಾಹನಗಳ ಸಂಚಾರ ನಿಷೇಧ-ಪರ್ಯಾಯ ಮಾರ್ಗಗಳ ವಿವರ ಹೀಗಿವೆ

ಬೆಂಗಳೂರು, ಫೆಬ್ರವರಿ, 08: ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಎಚ್‌ಎಎಲ್ ಸಂಚಾರ ಪೊಲೀಸರು ಮಾರತ್ತಹಳ್ಳಿ ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಭಾರಿ ಸರಕು ವಾಹನಗಳು, ಬಿಎಂಟಿಸಿ ಮತ್ತು ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಭಾರೀ ವಾಹನಗಳು ಐಟಿಪಿಎಲ್, ಕಾಡುಗೋಡಿ, ವರ್ತೂರು ಕೋಡಿ ಕಡೆಗೆ ಸಾಗಲು ಕಾರ್ತಿಕನಗರದ ಇಸ್ರೋ ಜಂಕ್ಷನ್‌ನಲ್ಲಿ ಯು-ಟರ್ನ್ ತೆಗೆದುಕೊಂಡು ಮುಂದೆ ಸಾಗಬಹುದು.

Heavy vehicles banned including BMTC buses on Marathahalli Outer Ring Road, what is the reason?

ನಗರದ ಕಡೆಗೆ ಬರುವ ವಾಹನಗಳು ಇಸ್ರೋ ಜಂಕ್ಷನ್‌ನಲ್ಲಿ ಎಡ ತಿರುವು ತೆದೆದುಕೊಂಡು ದೊಡ್ಡನೆಕ್ಕುಂದಿ ಗ್ರಾಮದಿಂದ ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆಗೆ ತೆರಳಬಹುದು. ಆದರೆ, ಶಾಲಾ ವಾಹನಗಳಿಗೆ ಮಾತ್ರ ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಪೀಣ್ಯ ಫ್ಲೈ ಓವರ್‌ ಬಂದ್‌: ಇನ್ನು ಕಳೆದ ಜನವರಿ 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೂ ಈ ಪೀಣ್ಯ ಫ್ಲೈ ಓವರ್‌ ಬಂದ್‌ ಆಗಿತ್ತು. ನಗರದಿಂದ ವಿವಿಧೆಡೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆಗಿರುವ ಪೀಣ್ಯ ಫ್ಲೈಓವರ್ ನಾಲ್ಕು ದಿನಗಳ ಕಾಲ ಬಂದ್ ಆಗಿತ್ತು.

ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಹೆದ್ದಾರಿಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಹಿನ್ನೆಲೆ ರಸ್ತೆ ಟೆಸ್ಟಿಂಗ್ ನಡೆಸಲಿರುವ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇನ್ನು ಪರ್ಯಾಯ ಮಾರ್ಗಗಳು ಹಾಗೂ ಸರ್ವೀಸ್ ರಸ್ತೆ ಬಳಕೆ ಮಾಡುವಂತೆ ಸಂಚಾರ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದರು.

ಪರ್ಯಾಯ ಮಾರ್ಗಗಳು: ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್​​ಹೆಚ್-4 ಮತ್ತು ಸರ್ವೀಸ್ ರಸ್ತೆಯ ಮೂಲಕ 8ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್ ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯಕ್ಕೆ ಹೋಗಬಹುದಾಗಿದೆ ಎಂದು ತಿಳಿಸಿದ್ದರು.

ಸಿಎಂಟಿಐ ಜಂಕ್ಷನ್‌​ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಹೋಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವೀಸ್ ರಸ್ತೆಯಲ್ಲಿ ಎಸ್​ಆರ್‌​ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚಾರ ಮಾಡಲು ಸೂಚಿಸಲಾಗಿತ್ತು.

ಯಾಕೆ ನಿರ್ಬಂಧ?: ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಲೋ ಮೀಟರ್‌ ಉದ್ದವಿರು ಪೀಣ್ಯ ಮೇಲ್ಸೇತುವೆಯ ವಯಾಡಕ್ಟ್​​ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಸಂಚಾರಕ್ಕೆ ನಿರ್ಬಂಧ ಹೇರಲು ಮುಖ್ಯ ಕಾರಣ ಆಗಿತ್ತು.

ಅದರಲ್ಲೂ ನಗರಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ವಾಹನಗಳು ಪೀಣ್ಯ ಫ್ಲೈಓವರ್‌ ಮೇಲೆಯೇ ಬರಬೇಕಾಗುತ್ತದೆ. ಆದ್ದರಿಂದ ಇದು ಹಲವು ಪ್ರಮುಖ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆಯಾಗಿದೆ. ಇದು ಬಂದ್‌ ಆದರೆ ವಾಹನ ಸವಾರರಿಗಂತೂ ಚಿತ್ರಹಿಂಸೆಯಾಗುತ್ತದೆ. ಆದ್ದರಿಂದಲೇ ಪೊಲೀಸರು ಯಾವುದೇ ತೊಂದರೆ ಆಗಬಾರದೆಂದು ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+