• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೆಬ್ಬಾಳ ಮೇಲ್ಸೇತುವೆಯನ್ನು ಶೀಘ್ರ ವಿಸ್ತರಣೆ ಮಾಡಲಿದೆ ಬಿಡಿಎ

|

ಬೆಂಗಳೂರು, ಡಿಸೆಂಬರ್ 20: ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಜವಾಬ್ದಾರಿಯನ್ನು ಬಿಡಿಎ ವಹಿಸಿಕೊಂಡಿದೆ. ಇದರಿಂದ ವಿಸ್ತರಣೆ ಕಾಮಗಾರಿ ಬಗೆಗಿದ್ದ ಗೊಂದಲಗಳು ದೂರವಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರದೊಳಗೆ ಬರುವ ವಾಹನಗಳಿಗೆ ಎದುರಾಗುತ್ತಿರುವ ಸಂಚಾರ ದಟ್ಟಣೆ ನೀಗಿಸಲು ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಮಾಡುವ ಕುರಿತು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದರಂತೆ ಬಿಡಿಎ ಈಗಾಗಲೇ ಕಾಮಗಾರಿ ಆರಂಭಿಸಬೇಕಿತ್ತು.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ

ಬಿಡಿಎಯಿಂದಲೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ಬಿಡಿಎ ನಷ್ಟದಲ್ಲಿದೆ ಹಾಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ಬಿಬಿಎಂಪಿಯಿಂದಲೇ ಕಾಮಗಾರಿ ಪೂರ್ಣಗೊಳಸಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.

ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ

ಆದರೆ ಮುಖ್ಯ ಕಾರ್ಯದರ್ಶಿಗಳು ನಡೆಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಬಿಡಿಎಯಿಂದಲೇ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.ಜಯದೇವ ಜಂಕ್ಷನ್ ಬಳಿ ಮೆಟ್ರೋ ರೈಲು ಹಾಗೂ ವಾಹನಗಳು ಏಕಕಾಲದಲ್ಲಿ ಸಂಚರಿಸಬಲ್ಲ ರೋಡ್ ಕಂ ರೇಲ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ.

ಬನ್ನೇರುಘಟ್ಟ ಕಡೆಯಿಂದ ಈಗಿರುವ ಗ್ರೇಡ್ ಸಪರೇಟರ್ ಗೆ ಸಂಪರ್ಕ ಕಲ್ಪಿಸುವ ಅರ್ಧ ಚಂದ್ರಾಕೃತಿ ಮೇಲ್ಸೇತುವೆ 2019ರ ಏಪ್ರಿಲ್‌ನಲ್ಲಿ ತೆರವಾಗಲಿದೆ.

ನಮ್ಮ ಮೆಟ್ರೋ ಎರಡನೇ ಹಂತದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮೆಟ್ರೋ ಕಾಮಗಾರಿ ಚುರುಕಿನಿಂದ ಸಾಗಿದೆ. ಆರ್‌ವಿ ರಸ್ತೆಯಿಂದ ಎಚ್‌ಎಸ್‌ಆರ್ ಲೇಔಟ್ ವರೆಗೆ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಹಿಂದುಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಹಾಗೂ ಯುಆರ್‌ಸಿ ಕಂ. ಪ್ರೈವೇಟ್ ಲಿ.ಗೆ ಬಿಎಂಆರ್‌ಸಿಎಲ್ ಗುತ್ತಿಗೆ ನೀಡಿದೆ.

ಆರ್‌ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣ ನಿರ್ಮಾಣ ಸೇರಿ ಒಟ್ಟು 6.34 ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣದ ಗುತ್ತಿಗೆ ಇದಾಗಿದೆ.

ಮಾರೇನಹಳ್ಳಿ ರಸ್ತೆ ಹಾಗೂ ಹೊರವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಚುರುಕಿನಿಂದ ಸಾಗಿದ್ದು, ನಿತ್ಯ ಟ್ರಾಫಿಕ್ ಹೆಚ್ಚಿದೆ. ಬನಶಂಕರಿ ಹಾಗೂ ಹೊರವರ್ತುಲ ರಸ್ತೆಯಿಂದ ಸಿಲ್ಕ್ ಬೋರ್ಡ್ ತಲುಪಲು ಜಯದೇವ ಜಂಕ್ಷನ್ ಮೂಲಕ ದಿನಕ್ಕೆ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಬನಶಂಕರಿಯಿಂದ ಬರುವ ವಾಹನಗಳು ಜಯದೇವ ಜಂಕ್ಷನ್ ಬಳಿಯಿಂದ ಮೇಲ್ಸೇತುವೆ ಹತ್ತಿ ಇನ್ನೊಂದು ಕಡೆ ಇಳಿಯುತ್ತವೆ.

English summary
Chief secretary instructed to BDA to carry out Hebbala flyover extension work. Earlier there were confusion within BBMP and BDA for this project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more