ಬೆಂಗಳೂರಿನಲ್ಲಿ ಮಾಜಿ ಜೆಡಿಎಸ್ ಕಾರ್ಪೋರೇಟರ್ ಬರ್ಬರ ಹತ್ಯೆ

ಬೆಂಗಳೂರು, ಡಿಸೆಂಬರ್ 9: ಬೆಂಗಳೂರಿನಲ್ಲಿ ಹಾಡುಹಗಲೇ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹೆಗ್ಗನಹಳ್ಳಿಯ ಮಾಜಿ ಬಿಬಿಎಂಪಿ ಜೆಡಿಎಸ್ ಕಾರ್ಪೋರೇಟರ್ ಗೋವಿಂದೇಗೌಡ ಅವರನ್ನು ನಗರದ ರಾಜಗೋಪಾಲನಗರದ ಹೆಗ್ಗನಹಳ್ಳಿ ಕ್ರಾಸ್ ಬಳಿ ಶನಿವಾರ ಸಂಜೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

 Hegganahalli former BBMP JDS corporator hacked to death in Bengaluru

ಸಭೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಒಳ ನುಗ್ಗಿ ಮಾರಕಾಸ್ತ್ರಗಳಿಂದ ಗೋವಿಂದೇಗೌಡ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಗೋವಿಂದೇಗೌಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಕೊನೆಯುಸಿರೆಳೆದರು.

ಸ್ಥಳಕ್ಕೆ ರಾಜಗೋಲನಗರದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹಳೆ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಬಿಜೆಪಿ ಮುಖಂಡ ಚಿಕ್ಕತಿಮ್ಮೇಗೌಡ ಕೊಲೆ ಆರೋಪದಡಿಯಲ್ಲಿ ಗೋವಿಂದೇಗೌಡ ಅವರು ಬಂಧನಕ್ಕೊಳಗಾಗಿದ್ದರು. ಬಳಿಕ ಜಾಮೀನಿನಲ್ಲಿ ಹೊರಬಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+