• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಫಲಿಸದ ಪ್ರಾರ್ಥನೆ; ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 15; ಲಕ್ಷಾಂತರ ಜನರ ಪ್ರಾರ್ಥನೆ ಫಲಕೊಡಲಿಲ್ಲ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ವಿಧಿವಶರಾಗಿದ್ದಾರೆ.

ಬುಧವಾರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸೇರಿದಂತೆ ಲಕ್ಷಾಂತರ ಜನರು ವರುಣ್ ಸಿಂಗ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಆರೋಗ್ಯ ವಿಚಾರಿಸಿದ ಗೃಹ ಸಚಿವರುಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಕಳೆದ ಬುಧವಾರ ಪತನಗೊಂಡಿತ್ತು. ಎಂಐ-17ವಿ5 ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ 13 ಜನರು ಮೃತಪಟ್ಟಿದ್ದರು. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ಗಂಭೀರವಾಗಿ ಗಾಯಗೊಂಡಿದ್ದರು. ಒಂದು ವಾರಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ವರುಣ್ ಸಿಂಗ್ ಇಂದು ವಿಧಿವಶರಾದರು.

ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ತಮಿಳುನಾಡಿನ ವೆಲ್ಲಿಂಗಟನ್‌ನಲ್ಲಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಶುಕ್ರವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹಳೇ ಏರ್ ಪೋರ್ಟ್ ರಸ್ತೆಯಲ್ಲಿರುವ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಭಾನುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ತಂದೆಯ ಜೊತೆ ಮಾತುಕತೆ ನಡೆಸಿದ್ದರು.

ಬಿಪಿನ್ ರಾವತ್ ಸಾವು ಸಂಭ್ರಮಿಸುತ್ತಿರುವ ದೇಶದ್ರೋಹಿಗಳ ಸರಣಿ ಬಂಧನಬಿಪಿನ್ ರಾವತ್ ಸಾವು ಸಂಭ್ರಮಿಸುತ್ತಿರುವ ದೇಶದ್ರೋಹಿಗಳ ಸರಣಿ ಬಂಧನ

ಮಂಗಳವಾರ ಬೆಂಗಳೂರಿನ ಕಮಾಂಡ್ ಆಸ್ಪತ್ರೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿತ್ತು. ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆದರೂ ಸ್ಥಿರವಾಗಿದೆ ಎಂದು ಹೇಳಿತ್ತು.

ಎಲ್ಲಾ 14 ಜನರು ಸಾವು; ಡಿಸೆಂಬರ್ 8ರಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಪತನಗೊಂಡಿತ್ತು. ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದರು.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಒಬ್ಬರೇ ಗಂಭೀರವಾಗಿ ಗಾಯಗೊಂಡು ಬದುಕುಳಿದಿದ್ದರು. ಇಂದು ಅವರು ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಹೆಲಿಕಾಪ್ಟರ್‌ ದುರಂತದಲ್ಲಿ ಎಲ್ಲಾ 14 ಜನರು ಸಹ ಮೃತಟ್ಟಿದ್ದಾರೆ.

ಭಾರತೀಯ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ತಮ್ಮ ಶೌರ್ಯ, ಸಾಹಸಕ್ಕಾಗಿ 2021ರ ಸ್ವತಂತ್ರ ದಿನಾಚರಣೆಯಂದು 'ಶೌರ್ಯ ಚಕ್ರ' ಪ್ರಶಸ್ತಿ ಪಡೆದಿದ್ದರು. ತಾಂತ್ರಿಕ ದೋಷ ಕಂಡು ಬಂದಿದ್ದ ಲಘು ತೇಜಸ್ ಯುದ್ಧ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ್ದರು.

ಕಳೆದ ಬುಧವಾರ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಇತರರು ಇದ್ದ ಹೆಲಿಕಾಪ್ಟರ್ ಸಂಪರ್ಕಾಧಿಕಾರಿಯಾಗಿ ಗ್ರೂಪ್ ಕ್ಯಾಪ್ಟನ್ ವರುಣ್‌ ಸಿಂಗ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಬಿಪಿನ್ ರಾವತ್ ಜೊತೆಗೆ ಹೆಲಿಕಾಪ್ಟರ್‌ ಹತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು; ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ತಂದೆ ಕರ್ನಲ್ (ನಿವೃತ್ತ) ಕೆ. ಪಿ. ಸಿಂಗ್. ಸೇನೆಯ ಎಎಡಿ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದಾರೆ. ಅವರ ಸಲಹೆಯಂತೆಯೇ ತಮಿಳುನಾಡಿನಿಂದ ವರುಣ್ ಸಿಂಗ್‌ರನ್ನು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆತರಲಾಗಿತ್ತು.

   Puneeth Rajkumar ದೇವರಾಗಿದ್ದು ಹೀಗೆ! | Oneindia Kannada

   ವರುಣ್ ಸಿಂಗ್ ಸಹೋದರ ಲೆಫ್ಟಿನೆಂಟ್ ಕರ್ನಲ್ ತಂಜು ಸಿಂಗ್ ಭಾರತೀಯ ನೌಕಾಪಡೆಯಲ್ಲಿದ್ದಾರೆ. ವರುಣ್ ಸಿಂಗ್ ಮೊದಲು ಬೆಂಗಳೂರಿನಲ್ಲಿರುವ ವಾಯುಪಡೆಯ ತರಬೇತಿ ಶಿಬಿರದಲ್ಲಿ ಪರೀಕ್ಷಾ ಪೈಲೆಟ್ ಆಗಿದ್ದರು. ಹಗುರ ಯುದ್ಧ ವಿಮಾನ ತೇಜಸ್ ನಿರ್ವಹಣೆ ನೋಡಿಕೊಳ್ಳುತ್ತಿದ್ದರು.

   English summary
   Group captain Varun Singh died in Commad hospital in Bengaluru. Varun Singh who is undergoing treatment at the hospital after helicopter crash.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X