6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್; ಪೊಲೀಸರ ಸ್ಪಷ್ಟನೆ

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ನಗರದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಹೆಲ್ಮೆಟ್ ಧರಿಸಬೇಕು. ಇಲ್ಲವಾದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರಿ ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಸುದ್ದಿಗಳು ವೈರಲ್ ಆಗಿವೆ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಂಚಾರಿ ಪೊಲೀಸರು ವೈರಲ್ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. 6 ವರ್ಷ ಮೇಲ್ಪಟ್ಟ ಸವಾರ, ಹಿಂಬದಿ ಸವಾರ ಹೆಲ್ಮೆಟ್ ಧರಿಸಬೇಕು ಎಂಬ ನಿಯಮವಿದೆ. ಈ ನಿಯಮ ಹೊಸದಲ್ಲ ಎಂದು ಸಂಚಾರಿ ವಿಭಾಗದ ಜಂಟಿ ಆಯುಕ್ತ ಎಂ. ಎನ್. ಅನುಚೇತ್ ಸ್ಪಷ್ಟಪಡಿಸಿದ್ದಾರೆ.

Helmet Mandatory For Children Above 6 Years Traffic Police Clarification

ವಿಶೇಷ ಕಾರ್ಯಾಚರಣೆ ಇಲ್ಲ; ಬೆಂಗಳೂರು ನಗರ ಸಂಚಾರಿ ಪೊಲೀಸರು 6 ವರ್ಷ ಮೇಲ್ಪಟ್ಟ ಮಕ್ಕಳು ಹೆಲ್ಮೆಟ್ ಧರಿಸದಿದ್ದರೆ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಪ್ರಯೋಗ ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

"6 ವರ್ಷ ಮೇಲ್ಪಟ್ಟ ಎಲ್ಲರೂ ಹೆಲ್ಮೆಟ್ (ಸವಾರ & ಹಿಂಬಂದಿ ಸವಾರ) ಧರಿಸಬೇಕು ಎಂಬ ನಿಯಮವಿದೆ. ಈ ನಿಯಮ ಹೊಸದೇನಲ್ಲ. ಆದರೆ ಈ ಸಂಬಂಧ ಸಂಚಾರಿ ಪೊಲೀಸರು ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸುವ ಯಾವುದೇ ಚಿಂತನೆ ಇಲ್ಲ" ಎಂದು ಎಂ. ಎನ್. ಅನುಚೇತ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸರು ಕೆಲವು ದಿನಗಳಿಂದ ಒನ್ ವೇ ಸವಾರರು, ವಾಟರ್ ಟ್ಯಾಂಕರ್, ಶಾಲಾ ಬಸ್, ಆಟೋಗಳು ಹೀಗೆ ವಿವಿಧ ವಾಹನ ಸವಾರರ ಮೇಲೆ ವಿಶೇಷ ಕಾರ್ಯಾಚರಣೆಯನ್ನು ನಡೆಸಿ ದಂಡ ವಸೂಲಿ ಮಾಡುತ್ತಿದ್ದಾರೆ.

ಇದೇ ಮಾದರಿಯಲ್ಲಿ ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. 6 ವರ್ಷ ಮೇಲ್ಪಟ್ಟ ಮಕ್ಕಳು ಹೆಲ್ಮೆಟ್ ಧರಿಸದಿದ್ದರೆ ದಂಡವನ್ನು ಹಾಕಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಈ ಕುರಿತು ಪೊಲೀಸರ ವಿರುದ್ಧ ಆಕ್ರೋಶವೂ ವ್ಯಕ್ತವಾಗಿತ್ತು. ಈ ಸುದ್ದಿಗೆ ಈಗ ಸ್ಪಷ್ಟನೆ ನೀಡಲಾಗಿದೆ.

ಸಂಚಾರಿ ಪೊಲೀಸರು ಲೈಸೆನ್ಸ್ ಇಲ್ಲದ ವ್ಯಕ್ತಿಗಳು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವುದು ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಅಪರಾಧವಾಗಿರುತ್ತದೆ ಎಂದು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ವಾಹನ ಚಾಲನೆ ಹಾಗೂ ವಿಲ್ಹೀಂಗ್ ಮತ್ತು ರೇಸಿಂಗ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಶಾಲಾ-ಕಾಲೇಜು ಮತ್ತು ನಗರ ಹೊರವಲಯ, ಇತರ ಪ್ರಮುಖ ಸ್ಥಳಗಳಲ್ಲಿ ಇಂತಹ ಅಪರಾಧ ಹಾಗೂ ವಾಹನ ಪರಿಶೀಲನೆ ಮಾಡುವ ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ. ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮೋಟಾರು ವಾಹನಗಳನ್ನು ಚಾಲನೆ ಮಾಡಲು ನೀಡಿದಲ್ಲಿ ಅಂತಹ ವಾಹನಗಳನ್ನು ಜಪ್ತಿ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ.

ಅಲ್ಲದೇ ಪೋಷಕರ ವಿರುದ್ಧ ಕಲಂ 5(1) ಆಧಾರ 180 ಐ.ಎಂ.ವಿ ಕಾಯ್ದೆ ಅಡಿ (ರೂ. 25,000 ದಂಡ ಮತ್ತು 3 ವರ್ಷಗಳ ಜೈಲುವಾಸ ಶಿಕ್ಷೆ) ಹಾಗೂ ಇತರ ಸೂಕ್ತ ಕಾನೂನಿನ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆದ್ದರಿಂದ ಪೋಷಕರು ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲು ಬೆಂಗಳೂರು ಪೊಲೀಸರು ವಿಶೇಷ ಅಭಿಯಾನವನ್ನು ನಡೆಸುತ್ತಾರೆ. ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಬೇಕು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು, ದ್ವಿಚಕ್ರ ವಾಹನದಲ್ಲಿ ಇಬ್ಬರು ಮಾತ್ರ ಕೂರಬೇಕು, ಕಾರು ಚಲಿಸುವಾಗ ಸೀಟ್ ಬೆಲ್ಟ್ ಧರಿಸಬೇಕು ಎಂದು ಜನರಲ್ಲಿ ಅರಿವು ಮೂಡಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+