ಬೆಂಗಳೂರಿನ ಜನರೇ ಗಮನಿಸಿ: ನೀರಿನ ಸಮಸ್ಯೆ ಇದ್ದರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು, ಮಾರ್ಚ್ 05: ಈ ಬಾರಿಯ ಬೇಸಿಗೆಗೆ ಸಿಲಿಕಾನ್‌ ಸಿಟಿಯ ಜನ ಹೈರಾಣಾಗಿ ಹೋಗಿದ್ದಾರೆ. ಒಂದೆಡೆ ಬಿರು ಬಿಸಿಲು, ಮತ್ತೊಂದೆಡೆ ನೀರಿನ ಅಭಾವ, ಈ ವರ್ಷದ ಬೇಸಿಗೆ ಎದುರಿಸುವುದು ಕಷ್ಟ ಎನ್ನುವುದು ಬೆಂಗಳೂರಿಗರ ಮಾತು. ಈ ಬಾರಿ ನಿರೀಕ್ಷೆಗೂ ಮೊದಲು ಬೇಸಿಗೆಯ ಬಿಸಿ ತಟ್ಟುತ್ತಿದ್ದು, ಮುಂದಿನ ಎರಡು ಮೂರು ತಿಂಗಳು ಕಳೆಯುವುದು ಹೇಗೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಆರಂಭವಾಗಿದೆ. ಕೊಳವೆ ಬಾವಿಗಳು ಬರಿದಾಗುತ್ತಿದ್ದು, ಎಲ್ಲೆಡೆ ಟ್ಯಾಂಕರ್ ನೀರಿನ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ನಗರದಲ್ಲಿ ನೀರಿನ ಕೊರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿ ನಿನ್ನೆ( ಮಾರ್ಚ್ 04) ಮಹತ್ವದ ಸಭೆ ನಡೆದಿದ್ದು, ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಒಂದಿಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ.

Helpline Number For Water Crisis In Bangalore

ಸಚಿವರರೊಂದಿಗಿನ ಸಭೆಯ ಬಳಿಕ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದು, ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಶೀಘ್ರ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ಧರಣೇಂದ್ರ ಕುಮಾರ್, ಕಾರ್ಯಪಾಲಕ ಅಭಿಯಂತರರು(ದಾಸರಹಳ್ಳಿ), ಬಿಬಿಎಂಪಿ ಇವರುನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.

ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್‌ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.

ಹೊರ ವಲಯಗಳಲ್ಲಿ ಬರುವ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ರವರು ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+