ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಬ್ಬಂದಿಗೆ ಸೋಂಕು: ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಕ್ವಾರೆಂಟೈನ್!

|
Google Oneindia Kannada News

ಬೆಂಗಳೂರು, ಜುಲೈ.27: ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

Recommended Video

EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿದೆ. ಈ ಹಿನ್ನೆಲೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರೆಂಟೈನ್ ನಲ್ಲಿ ಇರುವುದಾಗಿ ಮಾಹಿತಿ ನೀಡಿದ್ದಾರೆ.

Hemant Nimbalkar IPS Undergoes Home Quarantine After His Staff Tests Positive For Coronavirus

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ 3 ದಿನ ಸೀಲ್ ಡೌನ್ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ 3 ದಿನ ಸೀಲ್ ಡೌನ್

ಕೊರೊನಾವೈರಸ್ ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಲ್ಲಿ ಇರುವುದರಿಂದ ಶಿಷ್ಟಾಚಾರದ ಪ್ರಕಾರ ತಾವು ಸ್ವಯಂಪ್ರೇರಿತವಾಗಿ ಹೋಮ್ ಕ್ವಾರೆಂಟೈನ್ ನಲ್ಲಿ ಇರುವ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಸಾರ್ವಜನಿಕರಿಗೆ ಸಂದೇಶ:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮಿತಮೀರುತ್ತಿದೆ. ಇದರಿಂದ ಸಾರ್ವಜನಿಕರು ಜಾಗೃತರಾಗಬೇಕು. ಬಾಯಿ ಮತ್ತು ಮೂಗು ಮುಚ್ಚಿಕೊಳ್ಳುವಂತೆ ಮಾಸ್ಕ್ ಗಳನ್ನು ಧರಿಸಬೇಕು. ಕೊರಳಿಗೆ ಹಾಕಿಕೊಳ್ಳುವುದಕ್ಕೆ ಮಾಸ್ಕ್ ಗಳು ನಕ್ಲೆಸ್ ಅಲ್ಲವೇ ಅಲ್ಲ. ಈ ಬಗ್ಗೆ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಟ್ವಿಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

English summary
Hemant Nimbalkar IPS Undergoes Home Quarantine After His Staff Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X