ವಿದ್ಯಾರ್ಥಿಗಳೇ ಮರೆಯದೇ ಗಮನಿಸಿ, ಹಾಗೇ ಈ ಸುದ್ದಿ ಓದಿ!
ಬೆಂಗಳೂರಿನ ಬಾಪೂಜಿನಗರದ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ -1 ರಲ್ಲಿ 2023 & 24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದ್ರೆ ಯಾವ ಯಾವ ಕೋರ್ಸ್‌ಗೆ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು? ಅರ್ಜಿ ಹಾಕಲು ಇರುವ ಕೊನೆಯ ದಿನಾಂಕ ಯಾವುದು? ಮುಂದೆ ಓದಿ.
ಅಷ್ಟಕ್ಕೂ ಇದೀಗ ವಿದ್ಯಾರ್ಥಿಗಳು B.A./ B.Com/ B.Sc/ B.B.A/ B.C.A/ B.S.W. ಸೇರಿ BLib.I.Sc/ M.A/ M.Sc/ M.B.A/ M.Lib.I.Sc/ M.C.A/ M.S.W./ PG/ ಸೇರಿದಂತೆ, Certificate / Diploma/ UG Certificate ಶಿಕ್ಷಣ ಕ್ರಮಗಳಿಗೆ ದಿನಾಂಕ 09.01.2024 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ -01 ಬಾಪೂಜಿ ನಗರ ಇಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಕಬಹುದು. ಪ್ರಾವೇಶಾತಿಯನ್ನ ಪ್ರಾರಂಭಿಸಿದ್ದು, ದಿನಾಂಕ 31.03.2024 ಪ್ರವೇಶಾತಿಯ ಕೊನೆಯ ದಿನ ಆಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಇನ್ನ ಈ ಕೋರ್ಸ್‌ಗಳಿಗೆ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು, www.ksoumysuru.ac.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಈ ವೆಬ್‌ಸೈಟ್ ಮೂಲಕ ಅರ್ಜಿಗಳನ್ನ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳ ಜೊತೆ ಭೇಟಿ ನೀಡಿಬಹುದು. ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂದು ತಿಳಿಸಲಾಗಿದೆ.
ಕಚೇರಿಯ ವಿಳಾಸ ಇಲ್ಲಿದೆ ನೋಡಿ
ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೆ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಅಥವಾ ಈ ಬಗ್ಗೆ ಸಂಪರ್ಕಕ್ಕೆ ದೂರವಾಣಿ ಸಂಖ್ಯೆ: 080-2600 3664 ಹಾಗೂ 9844965515 ಮೂಲಕ ಸಂಪರ್ಕಿ ಮಾಡಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ, ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಹಾಗೇ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ, ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿಗಳ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
https://ssp.postmatric.karnataka.gov.in ಮೂಲಕ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹಾಗೇ ಇದರ ಜೊತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್ ಕರಿಯಪ್ಪ ಮುಖ್ಯ ರಸ್ತೆ , ಬನಶಂಕರಿ, ಬೆಂಗಳೂರು - 560070 ಇಲ್ಲಿಗೆ ಸಂಪರ್ಕ ಮಾಡಿ ಅಥವಾ ದೂರವಾಣಿ ಸಂಖ್ಯೆ ಆದ 080-26711096 ಮೂಲಕ ಸಂಪರ್ಕ ಮಾಡಬಹುದು ಅಂತಾ ಮಾಹಿತಿ ನೀಡಲಾಗಿದೆ.












Click it and Unblock the Notifications