Karnataka CM: ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ರಣದೀಪ್ ಸುರ್ಜೆವಾಲ ಹೇಳಿದ್ದಿಷ್ಟು

ಬೆಂಗಳೂರು, ಮೇ 14: ನಗರದ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯವಾಗಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧರಿಸುವ ಹೊಣೆಯನ್ನು ಹೈಕಮಾಂಡ್‌ಗೆ ನೀಡಲಾಗಿದೆ.

ಸಭೆಯ ನಂತರ ಮಾಧ್ಯಮಗಳ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, "ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸಲಿದೆ, ಎಲ್ಲಾ ಶಾಸಕರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಶಾಸಕಾಂಗ ನಾಯಕನನ್ನು ಹೈಕಾಂಡ್ ನಿರ್ಧರಿಸಲಿ ಎಂದು ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದು, ಇದಕ್ಕೆ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ135 ಶಾಸಕರು ಒಪ್ಪಿಗೆ ನೀಡಿದ್ದಾರೆ" ಎಂದು ಹೇಳಿದ್ದಾರೆ.

High Command Will Decide Next CM Of Tha Karnataka Says Randeep Singh Surjewala

ಎಐಸಿಸಿ ವೀಕ್ಷಕರು ಎಲ್ಲಾ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ, ಶಾಸಕರ ಮನಸ್ಸಿನಲ್ಲೇನಿದೆ ಎನ್ನುವುದನ್ನು ಅರಿತು ಅದನ್ನು ದೆಹಲಿಗೆ ಕಳಿಸಲಾಗುತ್ತದೆ ಅಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು. ಊಟದ ಸಂದರ್ಭದಲ್ಲಿ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೌಖಿಕ ರೂಪದಲ್ಲಿ ಅಭಿಪ್ರಾಯ ಪಡೆಯುವುದು ಗೊಂದಲಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಲಿಖಿತ ರೂಪದಲ್ಲಿ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ವೀಕ್ಷಕರು ನಿರ್ಧರಿಸಿದ್ದಾರೆ. ಒಂದು ವೇಳೆ ಶಾಸಕರ ಅಭಿಪ್ರಾಯದ ಆಧಾರದ ಮೇಲೆ ಸಿಎಂ ಆಯ್ಕೆ ಮಾಡಿದರೆ, ಸಿದ್ದರಾಮಯ್ಯ ಅವರ ಕೈ ಮೇಲಾಗುವ ಸಾಧ್ಯತೆ ಹೆಚ್ಚಾಗಿದೆ.

ಯಾರಿಗೆ ಒಲಿಯುತ್ತೆ ಸಿಎಂ ಪಟ್ಟ?

ಚುನಾವಣೆ ಸಂದರ್ಭದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ್ದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರ ನಡುವಿನ ವೈಮನಸ್ಸು ಮರೆತು ಇಬ್ಬರೂ ಕೂಡ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ, ಪ್ರಚಾರದಲ್ಲಿ ಭಾಗವಹಿಸಿ ಪಕ್ಷಕ್ಕೆ ಬಲ ತುಂಬಿದ್ದಾರೆ.

ಈಗ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಎಂ ಖುರ್ಚಿಗಾಗಿ ಇಬ್ಬರ ನಡುವೆ ಪೈಪೋಟಿ ಶುರುವಾಗಿದೆ. ನೇರವಾಗಿ ಹೈಕಮಾಂಡ್ ಸಿಎಂ ಆಯ್ಕೆ ಮಾಡಲಿ ಎಂದು ಡಿಕೆಶಿ ಹೇಳಿದರೆ, ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ, ಕೊನೆಗೆ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದು, ಇದರ ಆಧಾರದ ಮೇಲೆ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧಾರವಾಗಲಿದೆ.

ದೆಹಲಿಗೆ ಬರುವಂತೆ ನಾಯಕರಿಗೆ ಸೂಚನೆ

ಸಿಎಂ ಆಯ್ಕೆಯಲ್ಲಿ ಗೊಂದಲ ಉಂಟಾದ ಕಾರಣ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರು ನಾಯಕರ ಜೊತೆ ಚರ್ಚೆ ಮಾಡಲಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಹೊಣೆ ಈಗ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಬಿದ್ದಿದ್ದು, ಸೋಮವಾರವೇ ದೆಹಲಿಯಲ್ಲಿ ಮುಖ್ಯಮಂತ್ರಿ ಹೆಸರು ಘೋಷಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+