ಗ್ರಾಮೀಣ ಭಾಗಕ್ಕೆ ಪಶು ಆಸ್ಪತ್ರೆ ಸ್ಥಳಾಂತರಿಸಲು ಹೈ ಒಪ್ಪಿಗೆ
ಬೆಂಗಳೂರು, ಜ.6: ನಗರದಲ್ಲಿರುವ ಪಶುವೈದ್ಯ ಆಸ್ಪತ್ರೆಗಳನ್ನು ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದರೆ, ನಗರದಲ್ಲಿರುವ ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕೆಂದು ಆದೇಶಿಸಿದೆ.
ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 31 ಪಶುವೈದ್ಯ ಆಸ್ಪತ್ರೆಗಳನ್ನು ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಗೋಪಾಲಕರ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಸರ್ಕಾರ ಪ್ರಮಾಣಪತ್ರ : ಆದರೆ, ನಗರದಲ್ಲಿರುವ ಹೆಚ್ಚುವರಿ ಪಶುವೈದ್ಯ ಆಸ್ಪತ್ರೆಗಳನ್ನಷ್ಟೇ ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ನಗರದಲ್ಲಿರುವ ಜಾನುವಾರುಗಳಿಗೆ ಅಗತ್ಯ ಔಷಧೋಪಚಾರಕ್ಕಾಗಿ ಸಂಚಾರಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ಹೈಕೋರ್ಟ್‌ಗೆ ಸರ್ಕಾರ ಪ್ರಮಾಣಪತ್ರ ಸಲ್ಲಿಸಿತ್ತು.
ಸರ್ಕಾರದ ವಾದವನ್ನು ಒಪ್ಪಿದ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಹಾಗೂ ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ ಅರ್ಜಿ ಇತ್ಯರ್ಥಪಡಿಸಿತು.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 56 ಪಶು ವೈದ್ಯ ಆಸ್ಪತ್ರೆಗಳಲ್ಲಿ 31 ಆಸ್ಪತ್ರೆಗಳನ್ನು ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸಲು ಸರ್ಕಾರ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.












Click it and Unblock the Notifications