ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲೆ ತೊರೆದ ಮಕ್ಕಳ ಪತ್ತೆಗೆ ಮನೆ- ಮನೆ ಸಮೀಕ್ಷೆ ನಡೆಸಲು ಬಿಬಿಎಂಪಿಗೆ ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 29: ಶಾಲೆ ತೊರೆದ ಮಕ್ಕಳ ಪತ್ತೆಗೆ ಮನೆ ಮನೆ ಸಮೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಸುಮೋಟೋ ಅರ್ಜಿ ಸಂಬಂಧ ಹಿರಿಯ ವಕೀಲ ಕೆ.ಎನ್. ಫಣೀಂದ್ರ, 1-18 ವಯಸ್ಸಿನ ಮಕ್ಕಳನ್ನು ಒಳಗೊಂಡು ದಿನನಿತ್ಯದ ಆಧಾರದ ಮೇಲೆ ಸಮೀಕ್ಷೆ ಪ್ರಾರಂಭಿಸಲು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೋರಿದ್ದಾರೆ.

ರಾಜ್ಯದಲ್ಲಿ ಮೊದಲು ಪ್ರಾಥಮಿಕ ತರಗತಿ ಆರಂಭಿಸಲು ತಜ್ಞರ ಸಮಿತಿ ಸಲಹೆರಾಜ್ಯದಲ್ಲಿ ಮೊದಲು ಪ್ರಾಥಮಿಕ ತರಗತಿ ಆರಂಭಿಸಲು ತಜ್ಞರ ಸಮಿತಿ ಸಲಹೆ

ಜೂನ್ 2021ರ ಹೊತ್ತಿಗೆ ಗ್ರಾಮೀಣ ಪ್ರದೇಶದಲ್ಲಿ ಶೇ 91ರಷ್ಟು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೇ 70ರಷ್ಟು ಕುಟುಂಬಗಳ ಸಮೀಕ್ಷೆ ನಡೆಸಿರುವುದಾಗಿ ವರದಿ ತಿಳಿಸಿದೆ.

High Court Directed BBMP To Conduct Door To Door Survey Over Out Of School Children

ನಗರ ಪ್ರದೇಶದ 6 ರಿಂದ 18 ವರ್ಷದೊಳಗಿನ 12.28 ಲಕ್ಷ ಮಕ್ಕಳಲ್ಲಿ 8,718 ಮಕ್ಕಳು ಶಾಲೆಗೆ ಹೋಗುತ್ತಿಲ್ಲ ಹಾಗೂ 4,842 ಮಕ್ಕಳು ಶಾಲೆಗೆ ದಾಖಲಾಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ 33,344 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 9716 ಮಕ್ಕಳು ಶಾಲೆಗೆ ದಾಖಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಬಿಎಂಪಿ ಮಿತಿಯಲ್ಲಿ ನಡೆಯುವ ಸಮೀಕ್ಷೆಯಲ್ಲಿ, ಸಮೀಕ್ಷೆ ನಡೆಸುವವರಿಗೆ ತರಬೇತಿ ನೀಡಲು ಮಾಸ್ಟರ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದೆ.

Recommended Video

ಬೊಮ್ಮಾಯಿ ಹಿಂದೆ ಗಿರಕಿ ಹೊಡಿಯುತ್ತಿರುವ ವಲಸಿಗರು! | Oneindia Kannada

ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ ಮಾದರಿಯಲ್ಲಿಯೇ ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಸಮೀಕ್ಷೆ ನಡೆಸಬೇಕು ಎಂದು ಪೀಠ ನಿರ್ದೇಶನ ನೀಡಿ ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿದೆ.

English summary
High Court of Karnataka has asked the BBMP to conduct a door-to-door survey of out-of-school children in its limits
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X