ಬಿಬಿಎಂಪಿ ಚುನಾವಣೆ : ಯಾರು, ಏನು ಹೇಳಿದರು?

ಬೆಂಗಳೂರು, ಜೂ. 23 : ಸುಪ್ರೀಂಕೋರ್ಟ್ ಆದೇಶದಂತೆ 2015ರ ಆಗಸ್ಟ್‌ 5ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆ ಮುಂದೂಡುವ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ ಉಂಟಾಗಿದ್ದು, ಚುನಾವಣೆ ಎದುರಿಸುವುದು ಅನಿವಾರ್ಯವಾಗಿದೆ.

ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಅಂತಿಮ ಎಂದು ಹೇಳಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ಏಕಸದಸ್ಯ ಪೀಠ, ನಿಗದಿತ ಸಮಯದಲ್ಲಿ 2001ರ ಮೀಸಲಾತಿಯಂತೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ. ತೀರ್ಪಿನ ವಿರುದ್ಧ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಸರ್ಕಾರಕ್ಕೆ 10 ಸಾವಿರ ರೂ. ದಂಡ ವಿಧಿಸಿದೆ. [ಬಿಬಿಎಂಪಿ ಚುಣಾವಣೆ ಸರ್ಕಾರಕ್ಕೆ ಮುಖಭಂಗ]

ತಕ್ಷಣ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದರಿಂದ ಜೂನ್‌ 29ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ 20 ದಿನಗಳ ಬದಲು 10 ದಿನಕ್ಕೆ ಮೊಟಕಾಗುವ ಸಾಧ್ಯತೆಯಿದೆ. ಜೂನ್‌ 29ರಿಂದ ಜುಲೈ 10 ರವರೆಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮತ್ತು ಜುಲೈ 13 ರಿಂದ 24 ರವರೆಗೆ ಬೆಂಗಳೂರಿನಲ್ಲಿ ಒಟ್ಟು 20 ದಿನದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು.

ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮುಂದೂಡುವ ಸರ್ಕಾರದ ಪ್ರಯತ್ನ ವಿಫಲವಾಗಿದೆ. ಚುನಾವಣೆಯಲ್ಲಿ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಯಾರು, ಏನು ಹೇಳಿದರು ನೋಡೋಣ ಬನ್ನಿ....

ಸರ್ಕಾರದ ಮುಂದಿರುವ ಆಯ್ಕೆ ಏನು?

ಸರ್ಕಾರದ ಮುಂದಿರುವ ಆಯ್ಕೆ ಏನು?

* ಹೈಕೋರ್ಟ್‌ ಆದೇಶದಂತೆ ಬಿಬಿಎಂಪಿ ಚುನಾವಣೆ ನಡೆಸುವುದು
* ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆಯಾಗುವಂತೆ ಮಾಡಿ ಚುನಾವಣೆ ಮುಂದೂಡುವುದು

ಶೀಘ್ರದಲ್ಲೇ ದಿನಾಂಕ ಪ್ರಕಟ

ಶೀಘ್ರದಲ್ಲೇ ದಿನಾಂಕ ಪ್ರಕಟ

ಬಿಬಿಎಂಪಿ ವಾರ್ಡ್ ಮೀಸಲು ಪಟ್ಟಿಯನ್ನು ಸರ್ಕಾರ ಸಲ್ಲಿಸಿದೆ. ಅದರ ಆಧಾರದ ಮೇಲೆ ಚುನಾವಣೆ ನಡೆಸಲಾಗುವುದು. ಜೂ.23ರ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ನಂತರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಿದ್ಧತೆ ಮಾಡಿಕೊಂಡು ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೆಗೆ ನಾವು ಸಿದ್ಧವಾಗಿದ್ದೇವೆ

ಚುನಾವಣೆಗೆ ನಾವು ಸಿದ್ಧವಾಗಿದ್ದೇವೆ

ಆಗಸ್ಟ್ 5ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಸಹ ಇದೇ ಆದೇಶ ನೀಡಿದೆ. ನಾವು ಚುನಾವಣೆಗೆ ತಯಾರಾಗಿದ್ದೇವೆ ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಹೈಕೋರ್ಟ್ ಆದೇಶವನ್ನು ಗೌರವಿಸುತ್ತೇವೆ

ಹೈಕೋರ್ಟ್ ಆದೇಶವನ್ನು ಗೌರವಿಸುತ್ತೇವೆ

ಬಿಬಿಎಂಪಿ ಚುನಾವಣೆ ಕುರಿತು ಹೈಕೋರ್ಟ್ ನೀಡಿರುವ ಆದೇಶವನ್ನು ಗೌರವಿಸುತ್ತೇವೆ. ಈ ಆದೇಶದ ಪ್ರಕಾರ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಹೈಕೋರ್ಟ್‌ ಸರ್ಕಾರಕ್ಕೆ ದಂಡ ವಿಧಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ದೊರಕಿಲ್ಲ. ಕೋರ್ಟ್ ಆದೇಶದ ಪ್ರತಿ ಸಿಕ್ಕ ನಂತರ ಅದನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ತಕ್ಕ ಫಲ ಸಿಗಲಿದೆ

ರಾಜ್ಯ ಸರ್ಕಾರ ತಕ್ಕ ಫಲ ಸಿಗಲಿದೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಲು ಪ್ರಯತ್ನ ಪಟ್ಟ ಸರ್ಕಾರಕ್ಕೆ ತಕ್ಕ ಫಲ ಚುನಾವಣೆಯಲ್ಲಿ ಸಿಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಚುನಾವಣೆ ಮುಂದೂಡಲು ಸರ್ಕಾರ ಶತಾಯಗತಾಯ ಪ್ರಯತ್ನ ನಡೆಸಿತ್ತು. ಆದರೆ, ಚುನಾವಣೆ ನಡೆಸುವಂತೆ ಹೈಕೋರ್ಟ್‌ ಸೋಮವಾರ ಆದೇಶ ನೀಡಿದೆ. ಇದರಿಂದ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ

ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ

ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿದ್ದ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ. ನ್ಯಾಯಾಂಗದ ಶಿಸ್ತು ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದೆ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+