ಬೆಂಗಳೂರಿನಲ್ಲಿ ಕುದುರೆ ರೇಸ್:ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು, ಡಿಸೆಂಬರ್ 15 : ಬೆಂಗಳೂರು ಟರ್ಪ್ ಕ್ಲಬ್ ನಲ್ಲಿ ರೇಸ್ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.
ಸರ್ಕಾರವು ಸಮಿತಿಯೊಂದು ರಚಿಸಿ ಅನುಮತಿ ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಸರ್ಕಾರ ಹಾಗೂ ಬೆಂಗಳೂರು ಟರ್ಫ್ ಕ್ಲಬ್ ಸಮಾಲೋಚಿಸಿ ಷರತ್ತು ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು ಟರ್ಫ್ ಕ್ಲಬ್ ನ ಪರವಾನಗಿ ನವೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕುದುರೆ ಮಾಲೀಕರು ಅರ್ಜಿ ಸಲ್ಲಿಸಿದ್ದರು. ಬಿಟಿ ಪರವಾನಗಿ ನವೀಕರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಚ್.ಎನ್. ಚಂದ್ರೇಗೌಡ ಸೇರಿ 10 ಮಂದಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿತ್ತು.












Click it and Unblock the Notifications