ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆ.ಆರ್. ಮಾರುಕಟ್ಟೆಯಲ್ಲಿ ಅಕ್ರಮ ಮಳಿಗೆಗಳ ತೆರವು: ಬಿಬಿಎಂಪಿಗೆ 3 ತಿಂಗಳ ಗಡುವು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15: ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಕೃಷ್ಣರಾಜ ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಅನಧಿಕೃತ ಮಳಿಗೆಗಳ ಗುತ್ತಿಗೆ ಅವಧಿ ಮುಕ್ತಾಯವಾಗಿರುವ ಪರವಾನಗಿಯ ನವೀಕರಣ ಕಾರ್ಯವನ್ನು ಇನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್‌ ದ್ವಿಸದಸ್ಯ ಪೀಠ ಮಂಗಳವಾರ ನಿರ್ದೇಶನ ನೀಡಿದೆ.

ಬೆಂಗಳೂರು ನಗರದ ಪ್ರಮುಖ ಕೃಷ್ಣರಾಜ ಮಾರುಕಟ್ಟೆ ಸಂಕೀರ್ಣದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳನ್ನು ತೆರವುಗೊಳಿಸಲು ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ 'ಬೆಂಗಳೂರು ಹೂವು ವ್ಯಾಪಾರಿಗಳ ಸಂಘ'ವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

 High Court Gives Three Months To BBMP To Remove Illegal Shops From KR Market

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಇದಕ್ಕೂ ಮುನ್ನ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಅಮಿತ್‌ ದೇಶಪಾಂಡೆ ಪ್ರಮಾಣಪತ್ರ ಸಲ್ಲಿಸಿ "ಕೆ.ಆರ್. ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗಾಗಿ ಮೀಸಲಿಟ್ಟದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಗಳಿಗೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ," ಎಂದರು.

ಅಲ್ಲದೆ, "ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿರುವ ಒಟ್ಟು 24 ಮಳಿಗೆಗಳನ್ನು ತೆರವುಗೊಳಿಸಲಾಗುವುದು. ಒಟ್ಟು 1,266 ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುವುದು," ಎಂದು ತಿಳಿಸಿದರು.

 High Court Gives Three Months To BBMP To Remove Illegal Shops From KR Market

Recommended Video

ಸರ್‌.ಎಂ ವಿಶ್ವೇಶ್ವರಯ್ಯ ಜನ್ಮದಿನ ಹಿನ್ನೆಲೆ ಸಮಾಧಿಗೆ ಪೂಜೆ ಸಲ್ಲಿಕೆ

ಈ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು, ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿ ನಿರ್ಮಿಸಿರುವ 24 ಮಳಿಗೆಗಳನ್ನು ಕೂಡಲೇ ತೆರವುಗೊಳಿಸಬೇಕು. ಗುತ್ತಿಗೆ ಅವಧಿ ಮುಗಿದಿರುವ ಮಳಿಗೆಗಳ ಪರವಾನಗಿಯನ್ನು ಕಾನೂನು ಪ್ರಕಾರ ನವೀಕರಿಸುವ ವಿಚಾರವು ಬಿಬಿಎಂಪಿಗೆ ಬಿಟ್ಟ ವಿಚಾರ. ಒಂದೊಮ್ಮೆ ನವೀಕರಿಸಲು ಮಂದಾದರೆ ಮೂರು ತಿಂಗಳಲ್ಲಿ ಆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

English summary
The Karnataka High Court has issued a directive in connection with the operation of clearance of Illegal shops on the sidewalk of Krishnaraja market in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X