ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

|
Google Oneindia Kannada News

Recommended Video

ಕೊನೆಗೂ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಗೆ ಹೈ ಕೋರ್ಟ್ ನಿಂದ ಸಿಕ್ತು ಜಾಮೀನು

ಬೆಂಗಳೂರು, ಜೂನ್ 14: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮೊಹಮ್ಮದ್ ನಲಪಾಡ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟು, ತೀರ್ಪನ್ನು ಗುರುವಾರಕ್ಕೆ ಮುಂದೂಡಿತ್ತು.

ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರ 116 ದಿನಗಳ ಜೈಲುವಾಸಕ್ಕೆ ಕೊನೆಗೂ ಅಂತ್ಯ ಸಿಕ್ಕಂತಾಗಿದೆ.

ಮೊಹಮ್ಮದ್ ನಲಪಾಡ್‌ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರಮೊಹಮ್ಮದ್ ನಲಪಾಡ್‌ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರ

2 ಲಕ್ಷ ರೂ ಬಾಂಡ್ ನ ಎರಡು ಶ್ಯೂರಿಟಿ, ಪಾಸ್ ಪೋರ್ಟ್ ಅನ್ನು ಕೋರ್ಟಿಗೆ ಒಪ್ಪಿಸುವಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.

ನಲಪಾಡ್ ಪರ ವಕೀಲ ಬಿ ವಿ ಆಚಾರ್ಯ ವಾದ ಮಂಡಿಸಿದ್ದರು. ಜಾಮೀನಿಗಾಗಿ ಹಲವು ಸೆಷೆನ್ಸ್ ಕೋರ್ಟಿನಲ್ಲಿ ನಲಪಾಡ್ ಪರ ಅರ್ಜಿ ಸಲ್ಲಿಸಲಾಗಿತ್ತಾದರೂ, ಎಲ್ಲಾ ಅರ್ಜಿಗಳನ್ನೂ ವಜಾಗೊಳಿಸಲಾಗಿತ್ತು. ಇದೀಗ ಷರತ್ತುಬದ್ದ ಜಾಮೀನು ನೀಡಿರುವ ಹೈಕೋರ್ಟ್, ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎಂದಿದೆ.

 High court grants bail to Mohammed Nalapad

ತಮಿಳುನಾಡು ಮುಖ್ಯಮಂತ್ರಿ ದಿ.ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಜೈಲು ಶಿಕ್ಷೆ ವಿಧಿಸಿದ್ದ ನ್ಯಾ.ಜಾನ್ ಮೈಕಲ್ ಕುನ್ಹಾ ಅವರೇ ನಲಪಾಡ್ ಪ್ರಕರಣದ ನ್ಯಾಯಾಧೀಶರಾಗಿದ್ದರು.

ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಫೆಬ್ರವರಿಯಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಂತಿನಗರ ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್ ಸಲ್ಲಿಸಿದ್ದ ಎಲ್ಲಾ ಜಾಮೀನು ಅರ್ಜಿಗಳನ್ನೂ ಸೆಷೆನ್ಸ್ ಕೋರ್ಟು ವಜಾಗೊಳಿಸಿತ್ತು.

ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಇತರ 6 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.

English summary
Karnataka high court grants bail to Vidvat case prime accused Mohammed Nalapad
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X